Mahatma Gandhi, Lala Bahadur Shastriji Jayanti on 2nd
ಕೊಪ್ಪಳ, ಅಕ್ಟೋಬರ್ 1 ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಗ್ರಂಥಾಲಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ್ ಬಹದ್ದೂರ ಶಾಸ್ತಿçÃಜಿಯವರ ಜಯಂತ್ಯುತ್ಸವ ಸಮಾರಂಭ ಅಕ್ಟೋಬರ್ 2ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟಿಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ. ಪಟೇಲ್, ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಬೆಂಗಳೂರದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್‌ರಾಜ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ ಉಪಸ್ಥಿತರಿರುವರು. ಕೊಪ್ಪಳ ಜಿಲ್ಲೆಯ ಹಿರಿಯ ಲೇಖಕಿ ಮತ್ತು ಪತ್ರಕರ್ತೆ ಸಾವಿತ್ರಿ ಮುಜುಮದಾರ ಅವರು ಉಪನ್ಯಾಸ ನೀಡುವರು.
ಬಹುಮಾನ ವಿತರಣೆ : ಇದೆ ಸಮಾರಂಭದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಗಾಂಧೀ ಭಜನೆ, ಸರ್ವಧರ್ಮ ಪ್ರಾರ್ಥನೆ ಸೇರಿದಂತೆ ನಾನಾ ಕಾರ್ಯಕ್ರಮಗಳು ನಡೆಯಲಿವೆ.