Govt needs to make some changes in Excise Department: MLA MR Manjunath
ವರದಿ : ಬಂಗಾರಪ್ಪ .ಸಿ.
ಹನೂರು:ಇಂದಿನ ಕಾಲಘಟ್ಟದಲ್ಲಿ ನಮ್ಮ ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕವಾಗಿರುವುದರಿಂದ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಕೆಲವು ಪರ್ಯಾಯ ಮಾರ್ಪಡುಗಳನ್ನು ಮಾಡಬೇಕಾಗಿದೆ ಎಂದು ಶಾಸಕರಾದ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು.
ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಹನೂರು ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಚಾ ,ನಗರ ಜಿಲ್ಲೆ, ಗ್ರಾಮ ಪಂಚಾಯಿತಿ, ಸಾಲೂರು ಮಠ, ಶ್ರೀ ಮಲೆಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ಪ್ರಸ್ತುತ ಸರ್ಕಾರಕ್ಕೆ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಆದಾಯ ಬರುತ್ತಿದೆ ಎಂಬ ಮಾಹಿತಿ ಇದೆ. ಸರ್ಕಾರಕ್ಕೆ ಆದಾಯ ನೋಡುವುದರ ಜೊತೆಗೆ ಸಮಾಜದ ಒಳಿತನ್ನು ಸಹ ಪರಿಗಣಿಸಬೇಕು. ಎಷ್ಟೋ ಕುಟುಂಬಗಳು ಈ ಮದ್ಯ ವ್ಯಸನದಿಂದ ಸಂಕಷ್ಟಕ್ಕೆ ತುತ್ತಾಗಿವೆ. ಇಂತಹ ಪರಿಸ್ಥಿತಿಯಿಂದ ಮನೆಯ ವಾತಾವರಣವನ್ನು ಸಹ ಹಾಳು ಮಾಡಿಕೊಳ್ಳುತ್ತಿದ್ದಾರೆ, ಇದನ್ನು ವ್ಯಕ್ತಿಯ ಬದುಕಲ್ಲಿ ಹಾಗೂ ಸಮಾಜದಲ್ಲಿ ಬದಲಾವಣೆ ತರಲು ವಿವಿಧ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ ವಿಚಾರ. ಈ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ವೀರೇಂದ್ರ ಹೆಗಡೆಯವರ ಪರಿಕಲ್ಪನೆ ಮಾದರಿಯಾದದ್ದು.
ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ ಸಮಾಜದಲ್ಲಿ ಮಧ್ಯ ಸೇವನೆಯು ಒಂದು ಸಾಮಾಜಿಕ ಪಿಡುಗಾಗಿದ್ದು ,ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಹಲವಾರು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು ಶ್ಲಾಘನೀಯವಾದುದ್ದು , ಇಂದು
ನವಜೀವನ ಸದಸ್ಯರು ಮದ್ಯ ತ್ಯಜಿಸುವುದರ ಜೊತೆಗೆ ಇನ್ನಿತರರನ್ನು ಮದ್ಯ ಮುಕ್ತರನ್ನಾಗಿ ಮಾಡಿ ಧರ್ಮಸ್ಥಳ ಸಂಸ್ಥೆಯವರು ಇಂತಹ ಹಲವಾರು ಕಾರ್ಯಗಳನ್ನು ಮಾಡುತ್ತಿದ್ದು ಇಂತಹ ಕಾರ್ಯಗಳು ಮುಂದುವರೆಯಲಿ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮ.ಮ.ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಚಂದ್ರಶೇಖರ್, ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಸಿ ಬಂಗಾರಪ್ಪ . ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ರಾಜಶೇಖರ ಆರಾಧ್ಯ, ಅಧ್ಯಕ್ಷ ಎಂ.ಎಸ್.ರವಿಶಂಕರ್, ಉಪಾಧ್ಯಕ್ಷ ಪ್ರಸಾದ್ ಊರ್ದಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಪ್ರಾದೇಶಿಕ ಯೋಜನಾಧಿಕಾರಿ ಮಾಧವ, ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ಚಾ.ನ.ತಾ.ಯೋಜನಾಧಿಕಾರಿ ಹರೀಶ್ ಕುಮಾರ್, ಹನೂರು ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್, ಮುಖಂಡರಾದ ವಿಜಯ್ ಕುಮಾರ್, ಕೌದಳ್ಳಿ ಶಿವರಾಮು,ಶಿನಪ್ಪ ,ಸೇರಿದಂತೆ ಇನ್ನಿತರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಘದ ಮಹಿಳಾ ಸದಸ್ಯರು, ಸಾರ್ವಜನಿಕರು ಹಾಜರಿದ್ದರು .