The school staff gave a grand farewell to the teacher
ವರದಿ : ಬಂಗಾರಪ್ಪ ಸಿ ಹನೂರು.
ಹನೂರು :ನಮ್ಮ ಶಾಲೆಯಲ್ಲಿ ಶಿಕ್ಷಕಿಯವರು ವೃತ್ತಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇದೀಗ ಬೇರೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಮೋಚರಾಕಿಣಿ ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶಿಕ್ಷಕರಾದ ವೆಂಕಟರಾಜು ತಿಳಿಸಿದರು . ತಾಲೂಕಿನ ಅಜ್ಜೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿ ಬೇರೆಡೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಶಿಕ್ಷಣ ಸಂಯೋಜಕ ಚಿನ್ನಪ್ಪಯ್ಯ ಹಾರೈಸಿದರು.
ಶಿಕ್ಷಣ ನೀಡುವ ಪವಿತ್ರ ವೃತ್ತಿಯಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡಿದ್ದಾರೆ ಜೊತೆಗೆ ನಮ್ಮ ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಹೀಗಾಗಿ ಶಿಕ್ಷಕರನ್ನು ಗೌರವಿಸುವುದು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಕೂಡ ಆಗಿದೆ ಎಂದರು.
ಹಳೆಯ ವಿದ್ಯಾರ್ಥಿ ಸುರೇಶ್ ಮಾತನಾಡಿ, ಒಳ್ಳೆಯ ಹಾಗೂ ನೆಚ್ಚಿನ ಗುರುಗಳಾಗಿ ನಮ್ಮ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಇವರು ಬೇರೆ ಶಾಲೆಗೆ ವರ್ಗಾವಣೆಯಾಗಿದ್ದು, ಅವರ ವರ್ಗಾವಣೆ ನೋವು ತಂದರು ಸಹ ಇದೀಗ ಬೇರೆ ಶಾಲೆಯಲ್ಲಿ ಉತ್ತಮ ಸೇವೆ ಸಲ್ಲಿಸಲಿ ಜೊತೆಗೆ ಉತ್ತಮ ಆರೋಗ್ಯ ಕಾಪಾಡಲಿ ಎಂದು ಹೇಳಿದರು.
ಇದಕ್ಕೂ ಮುನ್ನ ಈ ಹಿಂದೆ ಶಾಲೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕೆಲಸ ಮಾಡಿದ್ದ ಅನೇಕ ಗುರುಗಳನ್ನು ಇದೆ ವೇಳೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪಿಡಿಒ ನಂದೀಶ್, ಇಸಿಒ ಮಹೇಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಳಿ, ಮುಖ್ಯ ಶಿಕ್ಷಕಿ ಮೇರಿ, ಹಾಗೂ ಗ್ರಾಮಸ್ಥರು,ವಿದ್ಯಾರ್ಥಿಗಳು ಹಾಜರಿದ್ದರು.