Breaking News

ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ: ಜಿಲ್ಲಾಧಿಕಾರಿ ನಿತೀಶ್ ಕೆ.

Let’s celebrate Diwali in an eco-friendly way: District Collector Nitish K.

ಜಾಹೀರಾತು






ರಾಯಚೂರು,ಅ.18,:- ಪ್ರತಿ ವರ್ಷದಂತೆ ಈ ವರ್ಷವು ದೀಪಾವಳಿಯನ್ನು ಜಿಲ್ಲಾದ್ಯಂತ ಸಡಗರದಿಂದ ಆಚರಿಸಲಾಗುತ್ತ್ತಿದ್ದು, ಹಬ್ಬದ ಸಂದರ್ಭದಲ್ಲಿ ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ.

ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿರುತ್ತದೆ.
ಈ ಹಿನ್ನಲೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಂಬಂಧ ಮಾನ್ಯ ಸರ್ವೋಚ್ಛ ನ್ಯಾಯಾಲಯವು ದಿನಾಂಕ: 23.10.2018 ಮತ್ತು ದಿನಾಂಕ: 31.10.2018 ಹಾಗೂ ತದನಂತರ ರಿಟ್ ಪೆಟಿಶನ್ ಸಂಖ್ಯೆ: 728/2015ರಲ್ಲಿ ನೀಡಿರುವ ನಿರ್ದೇಶನಗಳಂತೆ ಮತ್ತು ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ:ಆರ್‌ಡಿ 465 ಟಿಎನ್‌ಆರ್ 2020, ದಿನಾಂಕ: 12.11.2020 ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ದಿನಾಂಕ: 05.03.2024 ರಂತೆ ಪಟಾಕಿ ಬಳಕೆ ಕುರಿತಂತೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಪಟಾಕಿಗಳ ಮಾರಾಟ ವiತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಹಸಿರು ಪಟಾಕಿ ಗುರುತಿಸುವಿಕೆ: ಪಟಾಕಿ ಬಾಕ್ಸ್ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟಿçಯಲ್ ರಿಸರ್ಚ್ (ಅSIಖ) ಮತ್ತು ನ್ಯಾಷನಲ್ ಎನ್ವ್ವಿರಾಂಮೆAಟಲ್ ಇಂಜಿನಿಯರಿAಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಓಇಇಖI) ಇವರ ಲೋಗೋ ಹಾಗೂ ನೊಂದಿತ ಸಂಖ್ಯೆಯೊAದಿಗೆ ಮುದ್ರ‍್ರಿತವಾಗಿರಬೇಕು. ಹಸಿರು ಪಟಾಕಿ ಮಾರಾಟಗಾರರ ಪಟ್ಟಿಯನ್ನು ಜಾಲತಾಣ: gಡಿeeಟಿಛಿಡಿಚಿಛಿಞeಡಿ.ಛಿsiಡಿ@ಟಿeeಡಿi.ಡಿes.iಟಿ ರÀಲ್ಲಿ ಪ್ರಕಟಿಸಲಾಗಿದೆ.

ಅಧೀಕೃತ ಮಾರಾಟಗಾರರು ಸಂಬAಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡುವ ಪರವಾನಿಗೆಯಲ್ಲಿ ನಿಗಧಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬAದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು.

ಹಬ್ಬದ ಸಮಯದಲ್ಲಿ ರಾತ್ರಿ 08.00 ಗಂಟೆಯಿAದ 10.00ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ನಿಷೇಧಿಸಲಾಗಿದೆ. ರಾತ್ರಿ 10.00ಗಂಟೆಯಿAದ ಬೆಳಿಗ್ಗೆ 06.00ಗಂಟೆವರೆಗೆ ಪಟಾಕಿಗಳ ಸ್ಪೋಟವನ್ನು ನಿಷೇಧಿಸಲಾಗಿದೆ.

125ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ಹಾಗೂ ಸರಪಟಾಕಿಗಳ ಬಳಕೆಯನ್ನು ಸಹ ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ವೃದ್ಧಾಶ್ರಮ ಸುತ್ತಮುತ್ತಲೂ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ. ಸಾಧ್ಯವಾದಷ್ಟು ಹಣತೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಅವಸರವೇ ಅಪಘಾತಕ್ಕೆ ಕಾರಣ

Haste is the reason for the accident ಸರಾಸರಿ ಶೇ. 80ರಷ್ಟು ಅಪಘಾತಗಳು ಅವಸರದಿಂದಲೇ ಆಗುತ್ತಿವೆ. ಇವತ್ತಿನ ಯುವ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.