Deputy Collector instructs officials in preliminary meeting as part of Kannada Rajyotsava
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಶಿವಾನಂದ

ರಾಯಚೂರು,ಅ.22,():- ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ಹಾಗೂ
ಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಮತ್ತು ಅರ್ಥಪೂರ್ಣವಾಗಿ ಜಿಲ್ಲಾಡಳಿತ ವತಿಯಿಂದ ಆಚರಿಸಲು ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಅ.22ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಾಡು-ನುಡಿ ಮತ್ತು ಸಾಂಸ್ಕೃತಿಕ ಮೆರವಣಿಗೆ, ನಾಡು-ನುಡಿಯ ಬಿಂಬಿಸುವ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಲ್ಲದೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭಕ್ಕೆ ಅಗತ್ಯವಾದ ಆಸನ ವ್ಯವಸ್ಥೆ, ಧ್ವನಿವರ್ಧಕ ವ್ಯವಸ್ಥೆ, ಧ್ವಜಾರೋಹಣ ವ್ಯವಸ್ಥೆ, ಪಥ ಸಂಚಲನ ಹಾಗೂ ವಿದ್ಯಾರ್ಥಿಗಳಿಂದ ನಾಡು-ನುಡಿ ಬಿಂಬಿಸುವ ಸಾಮೂಹಿಕ ನೃತ್ಯ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲು ಸೂಚಿಸಿದರು.
ಅಂದು ಬೆಳಿಗ್ಗೆ 7.30ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಭುವನೇಶ್ವರಿ ಮಾತೆಯ ಪೂಜೆ ಕಾರ್ಯಾಕ್ರಮ ನಂತರ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣಕ್ಕೆ ಸಾರ್ವಜನಿಕರು ಬಂದು ಸೇರಲು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಬೇಕು.
ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆ, ಮೆರವಣಿಗೆ, ವೇದಿಕೆ ಅಲಂಕಾರ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಲ್ಲವನ್ನು ಮುಂಜಾಗ್ರತವಾಗಿ ಸಿದ್ಧತೆಕ್ರಮಕೈಗೊಳ್ಳಲು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳನ್ನು ಒಳಗೊಂಡ 09 ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಈ ವೇಳೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಮಾತನಾಡಿ, ಕನ್ನಡ ಪರ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಗೌರವಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಡಿ.ವೈ.ಎಸ್ಪಿ ಪ್ರಮಾನಂದಾ ಘೋಡಿಗೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ, ಕಾರ್ಮಿಕ ಇಲಾಖೆಯ ಅಧಿಕಾರಿ ಭರತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರು ಸಭೆಯಲ್ಲಿ ಇದ್ದರು