Breaking News

ಉಡುತೊರೆ ಜಲಾಶಯ ಭರ್ತಿಯಾಗಿದ್ದರು ಜಮೀನುಗಳ ಬೆಳೆಗಳಿಗೆ ನಾಲೆ ನೀರುಬೀಡುವಂತೆ ಹಾಗೂವಿವಿಧಬೇಡಿಕೆಗಳನ್ನ ಈಡೇರಿಸುವಂತೆ ಪ್ರತಿಭಟನೆ

Uduthore Reservoir was full and protested to irrigate the crops of the lands and fulfill various demands.

ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು :ಉತ್ತಮ ಮಳೆಯಾಗಿದ್ದ ಕಾರಣ ಉಡುತೊರೆ ಜಲಾಶಯವು ಭರ್ತಿಯಾಗಿದೆ ಆದರೆ ಇಂದಿನ ಪರಿಸ್ಥಿತಿಯಲ್ಲಿ ರೈತರ ಬೆಳೆಗಳಿಗೆ ನೀರಿಲ್ಲ ಹಾಗೂ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ನ.4 ರಂದು ಅಜ್ಜಿಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಮಾದ್ ಖಾನ್ ತಿಳಿಸಿದರು.

ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು
ಸರ್ಕಾರ ಅಜ್ಜಿಪುರ ರಾಮಾಪುರ ಕೌದಳ್ಳಿ ಕುರಟ್ಟಿ ಹೊಸೂರುಗ್ರಾಮಪಂಚಾಯಿತಿ ವ್ಯಾಪ್ತಿಯಜನರಿಗೆ ಅನುಕೂಲ ಕಲ್ಪಿಸಲು ಕೋಟ್ಯಂತರ ರುಪಾಯಿ ವೆಚ್ಚ ಮಾಡಿ ಉಡುತೊರೆ ಜಲಾಶಯ ನಿರ್ಮಾಣ ಮಾಡಲಾಗಿದೆ. ಕಳೆದ ಎರಡು ವರ್ಷಗಳಕಾಲ ಸತತ ಬರಗಾಲವಿದ್ದರಿಂದ ರೈತರು ತೀವ್ರ ತೊಂದರೆ ಅನುಭವಿಸಿದ್ದಾರೆ. ವರುಣನ ಕೃಪೆಯಿಂದ ಕಳೆದ ಒಂದು ತಿಂಗಳಿನಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಅಣೆಕಟ್ಟೆ ಭರ್ತಿಯಾಗುತ್ತಿದೆ. ಆದರೆ ಮುಖ್ಯ ಕಾಲುವೆಗಳಲ್ಲಿ ಕಸ ಕಡ್ಡಿಗಳು, ಗಿಡಗಂಟಿಗಳು ಬೆಳೆದಿರುವುದರಿಂದ ಕೊನೆಯ ಭಾಗದವರೆಗೆ ಜಲಾಶಯ ನೀರು ತಲುಪುತ್ತಿಲ್ಲ ಅಧಿಕಾರಿ ಗಳಿಗೆ ಮುಖ್ಯ ಕಾಲುವೆ ದುರಸ್ತಿ ಪಡಿಸುವಂತೆ ಹಲ ವಾರು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ,ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ ಖಂಡಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಮಯದಲ್ಲಿ
ಜಿಲ್ಲಾ ಸಂಚಾಲಕರಾದ ಶೈಲೇಂದ್ರ ಮಾತನಾಡಿ, ಅರಣ್ಯ ಇಲಾಖೆಯು ಮಲೆ ಮಹದೇಶ್ವರ ಬೆಟ್ಟ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಗ್ರಾಮಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಮೂಲಭೂತಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಿದೆ. ಆದರೆ ಇದುವರೆಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಟ್ಟಿಲ್ಲ. ಸರ್ಕಾರದ ಕಾನೂನನ್ನೇ ಉಲ್ಲಂಘನೆ ಮಾಡಿರುವ ಹಿರಿಯ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು.ಸ್ವಾತಂತ್ರ್ಯ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಠಾಣೆಯನ್ನು ನಿಗದಿ ಮಾಡಲಾಗಿದೆ. ಸರ್ಕಾರ ಹೊಸದಾಗಿ ಗ್ರಾಮ ಠಾಣೆ ಸರ್ವೆ ಮಾಡುವಂತೆ ಸೂಚನೆ ನೀಡಿದ್ದರೂ ಇದುವರೆಗೂ ಯಾವುದೇ ಸರ್ವೆ ಮಾಡದೆ ಇರುವುದರಿಂದ ನಿವಾಸಿಗಳಿಗೆ ತೊಂದರೆಯಾಗಿದೆ, ಹಾಗಾಗಿ ಈ ಕೂಡಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸದಾಗಿ ಸರ್ವೆ ಮಾಡಿಸಿ ಸ್ಥಳೀಯ ನಿವಾಸಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷರಾದ ಗೌಡೇಗೌಡ ಮಾತನಾಡಿ,ರಾಜ್ಯದ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ಭಕ್ತಾದಿಗಳಿಗೆಅರಣ್ಯ ಇಲಾಖೆವತಿಯಿಂದ 200 ರುಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಅರಣ್ಯ ಇಲಾಖೆಯವರು ತೊಂದರೆ
ನೀಡುತ್ತಿದ್ದು .ಆದರೆ ಚಾರಣದ ಹೆಸರಿನಲ್ಲಿ ಭಕ್ತರಿಂದ ಹಣ ವಸೂಲಿ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಭಕ್ತಾದಿಗಳಿಂದ ಹಣ ವಸೂಲಿ ಮಾಡಿ ಏನು ಸಾಧನೆ ಮಾಡಬೇಕು. ಈ ಕೂಡಲೇ ಸಂಬಂಧ ಪಟ್ಟ ಅರಣ್ಯ ಸಚಿವರು ಈ ಆದೇಶವನ್ನು ಹಿಂಪಡೆ ಯಬೇಕು, ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಯವರು ತಾಳುಬೆಟ್ಟದಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಂದ ಹಣ ವಸೂಲಿ ಮಾಡು ವುದರಲ್ಲಿ ಯಾವುದೇ ಅನುಮಾನವಿಲ್ಲ, ಈ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕರು ಸಹ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ನಡೆಸಿ ಅರಣ್ಯ ಇಲಾಖೆ ವತಿಯಿಂದ ಹಣ ಪಡೆಯುತ್ತಿರುವುದನ್ನು ನಿಲ್ಲಿಸಬೇಕು
ಎಂದು ಶಾಸಕರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಗೌರವಾಧ್ಯಕ್ಷ ರಾಜಣ್ಣ, ರವಿ ನಾಯ್ಡು, ಗ್ರಾಮ ಘಟಕಗಳ ಅಧ್ಯಕ್ಷರಾದ ಅರ್ಪುದರಾಜ್‌, ಡೇವಿಡ್,ತಂಗವೇಲು, ಮಹಿಳಾ ಘಟಕದ ಅಧ್ಯಕ್ಷೆ ಪೊಂಗೋಡಿ, ಲೋಕೇಶ್ ಗೌಡ ,ವೆಂಕಟೇಶ್‌ ಇನ್ನಿತರರು ಹಾಜರಿದ್ದರು.

About Mallikarjun

Check Also

ಆರನೇಯ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಹೋರಾಟ

The civil servants’ struggle has entered its sixth day ಕಾರಟಗಿ ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.