Breaking News

ಮಾದಪ್ಪನ ಭಕ್ತರ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕರ ಸಲಹೆ

MLA’s advice to the authority officials to provide basic facilities for the devotees of Madappa.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು: ದೇವಾಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಪ್ರಾಧಿಕಾರವು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ನಂತರ ಮಾತನಾಡಿದ ಅವರು ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ‌ ಶೌಚಾಲಯ, ಯುಜಿಡಿ ಹಾಗೂ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿದ ಅವರು ಮಹದೇಶ್ವರ ಬೆಟ್ಟಕ್ಕೆ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ದಿನಗಳಲ್ಲಿ ಸಾವಿರಾರು ಜನ ಭಕ್ತಾದಿಗಳು ಭೇಟಿ ನೀಡುತ್ತಿದ್ದಾರೆ. ಆದರೆ ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದೆ ಇರುವುದರ ಬಗ್ಗೆ ನಮಗೆ ಹಲವಾರು ದೂರುಗಳು ಬರುತ್ತಿದೆ. ಸಂಬಂಧ ಪಟ್ಟವರು ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಪ್ರತಿ ಎರಡು ಗಂಟೆಗಳಿಗೊಮ್ಮೆ ಶೌಚಾಲಯವನ್ನು ಸ್ವಚ್ಛಗೊಳಿಸಬೇಕು ಮುಂದಿನ ದಿನಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡದೆ ಇದ್ದರೆ ಶೌಚಾಲಯದ ಉಸ್ತುವಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಂದಿನ ದಿನಗಳಲ್ಲಿ ಉದ್ಘಾಟನೆಗಾಗಿ 27 ಕೋಟಿ ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಪೂರ್ಣಗೊಂಡಿದ್ದು ಮೊದಲು ಸ್ವಚ್ಛ ನೀರನ್ನು ಬಿಟ್ಟು ಪರಿಶೀಲನೆ ನಡೆಸಬೇಕು ಯಾವುದೇ ಸಮಸ್ಯೆಗಳು ಬಾರದಿದ್ದರೆ ನಂತರ ಚರಂಡಿ ಯ ನೀರಿನ ಸಂಪರ್ಕ ಕೊಡಬೇಕು ಎಂದು ಸಲಹೆ ನೀಡಿದರು. ಪ್ರಾಧಿಕಾರದ ವ್ಯಾಪ್ತಿಯ ರಸ್ತೆಗಳು ಹಳ್ಳ ಗುಂಡಿಗಳಿಂದ ಕೂಡಿರುವುದರಿಂದ ಮಳೆಗಾಲದಲ್ಲಿ ಮಳೆಯ ನೀರು ನಿಂತು ಪಾದಚಾರಿಗಳು ಹಾಗೂ ಭಕ್ತಾದಿಗಳು ಸಂಚರಿಸಲು ತೊಂದರೆಯಾಗುತ್ತಿದೆ ಕೂಡಲೇ ಗುಂಡಿ ಮುಚ್ಚಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು , ಜಾತ್ರಾ ಮಹೋತ್ಸವದ ನಂತರ ಜರುಗುವ ತೆಪ್ಪೋತ್ಸವ ಕಾರ್ಯಕ್ರಮಕ್ಕೆ ನಿರ್ಮಾಣ ಮಾಡಿರುವ ಕಲ್ಯಾಣಿಗೆ ತನ್ನದೇ ಆದ ಇತಿಹಾಸವಿದೆ ಈ ಕಲ್ಯಾಣಿಗೆ ಯಾವುದೇ ರೀತಿಯ ಗಲೀಜು ನೀರು ಬಾರದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್ ಲೋಕಪಯೋಗಿ ಇಲಾಖೆಯ ಎಇಇ ಚಿನ್ನಣ್ಣ,ಮಹೇಶ್, ಪ್ರಾಧಿಕಾರದ ಅಭಿಯಂತರ ಸೆಲ್ವ ಗಣಪತಿ, ಮುಖಂಡರಾದ ಡಿ,ಆರ್ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *