Breaking News

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again.

ಜಾಹೀರಾತು


ವರದಿ : ಬಂಗಾರಪ್ಪ .ಸಿ .
ಹನೂರು:ಚಾಮರಾಜನಗರ:ಹಲವಾರು ಮುಗ್ದಜನರ ಜೀವದ ಜೊತೆಯಲ್ಲಿ ಆಟವಾಡಿದ ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ.
ಸಾಲೂರು ಮಠದ
ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ನ್ಯಾಯಾಧೀಶೆ ಬಿ.ಎಸ್ ಭಾರತಿ ರವರು ವಜಾಗೊಳಿಸಿದ್ದಾರೆ.

ಈಗಾಗಲೆ ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳಲ್ಲು ಕೂಡ ಸಲ್ಲಿಸಿದ್ದ ಅರ್ಜಿ ವಜಾ ಆಗಿತ್ತು. ಆದರೆ ಈಗ ಅನಾರೋಗ್ಯದ ಕಾರಣ ನೀಡಿ ಮತ್ತೆ ಜಿಲ್ಲಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಅಲ್ಲಿಸಿದ್ದ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಅರ್ಜಿಯನ್ನು ಚಾಮರಾಜನಗರ ಜಿಲ್ಲಾ ನ್ಯಾಯಾಲಯ ವಜಾ ಮಾಡಿದೆ.

ಕಳೆದ 5 ವರ್ಷ 11 ತಿಂಗಳಿಂದ ಜೈಲಿನಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಮಹದೇಶ್ವರ ಬೆಟ್ಟ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಸಂದರ್ಭದಲ್ಲಿ ಸುಳ್ವಾಡಿ ಕಿಚ್‌ಗುತ್ ಮಾರಮ್ಮ ದೇವಸ್ಥಾನದ ಆಡಳಿತದಲ್ಲಿ ಅಧಿಪತ್ಯ ಸ್ಥಾಪಿಸಲು ಪಿತೂರಿ ಮಾಡಿ ಮತ್ತೊಂದು ಗುಂಪಿಗೆ ಕೆಟ್ಟ ಹೆಸರು ತರಲು ಪ್ರಸಾದಕ್ಕೆ ವಿಷ ಬೆರೆಸಿ ಪ್ರಸಾದ ವಿತರಿಸಿದ ಘಟನೆಯಲ್ಲಿ 17 ಮಂದಿ ಭಕ್ತರು ಮೃತಪಟ್ಟಿದ್ದರು, 127 ಮಂದಿ ಅಸ್ವಸ್ಥಗೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿ, ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ದೇವಸ್ಥಾನದ ವ್ಯವಸ್ಥಾಪಕ ಮಾದೇಶ್, ನಾಲ್ಕನೇ ಆರೋಪಿ ತಂಬಡಿ ದೊಡ್ಡಯ್ಯ ಪ್ರಸ್ತುತ ಇವರುಗಳು ಮೈಸೂರು ಜೈಲಿನಲ್ಲಿದ್ದಾರೆ.

About Mallikarjun

Check Also

ಯತ್ನಾಳ್ ಉಚ್ಛಾಟನೆ: ಸಾವಳಗಿಯಲ್ಲಿ ಪ್ರತಿಭಟನೆ

Yatnal’s expulsion: Protest in Savalagi ಸಾವಳಗಿ: ಯತ್ನಾಳ್‌ ಅವರನ್ನು ರಾಜಕೀಯದಲ್ಲಿ ಹತ್ತಿಕ್ಕಲು ಯಡಿಯೂರಪ್ಪ ಅವರು ಕುತಂತ್ರದಿಂದ ಉಚ್ಚಾಟನೆ ಆದೇಶ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.