Breaking News

ಪಂಚಮಸಾಲಿ ಸಮುದಾಯದ 2A ಮೀಸಲಾತಿ ಬೇಡಿಕೆ ಸಂಬಂಧ ಬೆಳಗಾವಿಯ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಉತ್ತರ

Answer given by Chief Minister Siddaramaiah in Belgaum session regarding 2A reservation demand of Panchamasali community

ಜಾಹೀರಾತು
Screenshot 2024 12 09 20 16 53 66 F9ee0578fe1cc94de7482bd41accb329

ಕೃಪೆ: ಸಿದ್ದರಾಮಯ್ಯ ಅವರ ಫೇಸ್ ಬುಕ್

ಪಂಚಮಸಾಲಿ
ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು.

ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ.

ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.