Breaking News

ಜ.19ರಂದು ಜಿಲ್ಲಾಡಳಿತದಿಂದ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ

Celebration of Shri Mahayogi Veman Jayanti by District Administration on 19th Jan

ಜಾಹೀರಾತು


ರಾಯಚೂರು ಜ.15 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜನವರಿ 19ರ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜಿ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ರಾಯಚೂರ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಹಕಾರ್ಯದರ್ಶಿಗಳಾದ ದಂಡಪ್ಪ ಬಿರಾದಾರ ಅವರು ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ

Progress review of guarantee schemes in Anegundi Gram Panchayat ಗಂಗಾವತಿ: ಸರ್ಕಾರದ ಆದೇಶದಂತೆ ಗ್ಯಾರಂಟಿ ಸಮಿತಿಗಳ ನಡೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.