Breaking News

ಇಂದು ಬೆಂಗಳೂರು ವಿವಿ:ಹಿರಿಯಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ‌

Indu Bangalore University: Senior Professor, Koppal University Chancellor Prof. Farewell ceremony of B.K Ravi

ಜಾಹೀರಾತು

ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಬಿ.ಕೆ.ರವಿ ರವರು 2025ರ ಜನವರಿ 31ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಷ್ಟ್ರುಗೆ ಬೆಂಗಳೂರು ವಿವಿಯ ಸಂವಹನ ವಿಭಾಗದ ಅಧ್ಯಾಪಕರ ವೃಂದ, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ (ಜನವರಿ 31ರಂದು ಬೆಳಗ್ಗೆ 11.00 ಗಂಟೆಗೆ) ಬೆಂಗಳೂರು ವಿಶ್ವವಿದ್ಯಾಲಯದ

ಜ್ಞಾನಭಾರತಿ ಆವರಣದಲ್ಲಿರುವ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ. ಜಯಕರ ಶೆಟ್ಟಿ ಎಂ. ಅವರು ಪ್ರೊ. ಬಿ.ಕೆ ರವಿ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಂ, ಎಸ್. ರವಿಕುಮಾರ್, ಮುಖ್ಯಸ್ಥರು, ನ್ಯೂಸ್ ಫರ್ಸ್ಟ್ ಅವರು ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೈಖ್ ಲತೀಫ್, (ಮೌಲ್ಯಮಾಪನ) ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಹಣಕಾಸು ವಿಭಾಗದ ಅಧಿಕಾರಿ ಡಾ. ಸುನೀತಾ ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾ ಡಾ.ಬಿ. ಶೈಲಶ್ರೀ, ಸಹಾಯಕ ಪ್ರಾಧ್ಯಾಪಕಿ ಡಾ. ವಸುಂಧರಾ ಪ್ರಿಯದರ್ಶಿನಿ ಎಂ,
ಭೋದಕೇತರ ಸಿಬ್ಬಂದಿಗಳಾದ ಮಂಜುನಾಥ್, ರವಿ, ರತ್ನಮ್ಮ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ಸಂವಹನ ವಿಭಾಗದ ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು, ಅಭಿಮಾನಿಗಳು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

About Mallikarjun

Check Also

ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ

Progress review of guarantee schemes in Anegundi Gram Panchayat ಗಂಗಾವತಿ: ಸರ್ಕಾರದ ಆದೇಶದಂತೆ ಗ್ಯಾರಂಟಿ ಸಮಿತಿಗಳ ನಡೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.