The biker died on the spot in the horrific accident

ತಿಪಟೂರು .ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕರಡಿ ಕೋಡಿಯಲ್ಲಿ ಬೆಂಗಳೂರು ಮಾರ್ಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟ ಧಾರುಣ ಘಟನೆ ನಡೆದಿದೆ
ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ 30 35 ಆಸು ಪಾಸಿನ ವರ್ಷದ ಅವಿನಾಶ್ ಮೃತ ದುರ್ದೈವಿ.
ನಿರ್ಮಾಣ ಹಂತದ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸುರಕ್ಷತಾ ನಿಯಮಗಳನ್ನ ಪಾಲನೆ ಮಾಡಿಲ್ಲ. ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜಾವಾಬ್ದಾರಿಯಿಂದ ಕರಡಿ ಗ್ರಾಮ ಹಾಗೂ ಕರಡಿ ಕೋಡಿಯಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದ್ದು,ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತವಾಗಿದ್ದು ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು. ಹೆದ್ದಾರಿ ಕಾಮಗಾರಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳ ಬೇಕು ಎಂದು ಸ್ಥಳೀಯ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ತಿಪಟೂರುನಗರ ಪೊಲೀಸ್ ಹಾಗೂ ಕೆ.ಬಿ ಕ್ರಾಸ್ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಳ್ಳಲಾಗಿದೆ.
ವರದಿ ಮಂಜು ಗುರುಗದಹಳ್ಳಿ
Kalyanasiri Kannada News Live 24×7 | News Karnataka
