“CM Siddaramaiah’s Residence: Siege by Gram Panchayat Employees Union”

ಕೊಟ್ಟೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಫೆಬ್ರವರಿ 20 ರಂದು ಗುರುವಾರ ಮುಖ್ಯಮಂತ್ರಿಗಳ ನಿವಾಸದ ಮುಂದುಗಡೆ ಹೋರಾಟಕ್ಕಿಳಿಯುವುದಾಗಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಜಿಲ್ಲಾ ಘಟಕಾಧ್ಯಕ್ಷ ಆರ್.ಎಸ್.ಬಸವರಾಜ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸರ್ಕಾರಿ ನೌಕಕರೆಂದು ಪರಿಗಣಿಸುವುದು , ವೇತನ ಪರಿಷ್ಕರಣೆ, ಪಿಂಚಣಿ, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸುವುದು ಹಾಗೂ ಪ್ರತಿಯೊಂದು ಪಂಚಾಯತಿಗಳಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಠಿಸುವುದು, ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ, ಜನಸಂಖ್ಯೆಗನುಗುಣವಾಗಿ ಪಂಚಾಯಿತಿಗಳನ್ನು ಮೇಲ್ದರ್ಜೇಗೆರಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿದರು.
ತಾಲ್ಲೂಕು ಘಟಕಾಧ್ಯಕ್ಷ ಎ.ಬಿ.ಎಂ.ಪ್ರವೀಣ್ ಕುಮಾರ್ ಮಾತನಾಡಿ ಸರ್ಕಾರದ ಗಮನ ಸೆಳೆಯಲು ಹಲವಾರು ಬಾರಿ ಹೋರಾಟಕ್ಕಿಳಿದರು ಸರ್ಕಾರ ಸ್ಪಂದಿಸದ ಕಾರಣ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಡಿ.ಒಬಳೇಶ್, ಖಜಾಂಚಿ ವಿ.ಕೊಟ್ರೇಶ್ ಇದ್ದರು.