Launch of new clean drinking water plant in Tala Hill: MLA MR Manjunath.

ವರದಿ : ಬಂಗಾರಪ್ಪ .ಸಿ.
ಹನೂರು : ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಇಂದು ತಾಳಬೆಟ್ಟದಲ್ಲಿ ಶುದ್ದ ನೀರಿನ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಯಿತು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.
ನಂತರ ಮಾತನಾಡಿದ ಅವರು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಅರಣ್ಯ ಇಲಾಖೆ ಮತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವು ಜೋತೆಗೂಡಿ ಪಣ ತೊಟ್ಟಿರುವುದು ಶ್ಲಾಘನೀಯವಾದ ಸಂಗಾತಿ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು.ಡಿ. ಆರ್.ಎಫ್ ಶಿವರಾಜ್ ,ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ,ಚಿನ್ನವೆಂಕಟ್, ವಿಜಯ್ ಕುಮಾರ್ ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು.