Breaking News

ಶೂದ್ರ ಭಕ್ತರೆ ಬರುವ ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತಪ್ರದೆಶವಾಗಲಿದೆ : ಸಿ.ಎಂ.ಘೋಷಣೆ

Malai Mahadeshwar hill, where Shudra devotees come, will henceforth be a water-free area: CM announces

ಜಾಹೀರಾತು
IMG 20250424 WA0171


ವರದಿ : ಬಂಗಾರಪ್ಪ .ಸಿ .
ಹನೂರು :ತಾಲ್ಲೂಕಿನ ಮಾದಪ್ಪನ ಸನ್ನಿಧಿಯಲ್ಲಿ
ಇಲ್ಲಿಯವರೆಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು
ಪ್ರಾಧಿಕಾರದ ಕಛೇರಿಯಲ್ಲಿ ಮಾತನಾಡಿದ ಅವರು
ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ
ಮಲೈ ಮಹದೇಶ್ವರ ಏ24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು…
ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.
ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.
ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.
ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು…
2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಸೂಚನೆ.
ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡಬಾರದು.
ಭಕ್ತಾಧಿಗಳಿಗೆ ಉತ್ತಮ‌ ಕುಡಿಯುವ ನೀರು, ಶುಚಿತ್ವದ ಶೌಚಾಲಯ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು.
ಹೆಚ್ಚಿನ ಸಂಖ್ಯೆಯ ಶೌಚಾಲಯಗಳನ್ನು ನಿರ್ಮಿಸಬೇಕೆಂದರು. ಇದೇ ಸಂದರ್ಭದಲ್ಲಿ ಸಾಲೂರು ಶ್ರೀ ಗಳಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಜೀಗಳು ,ಸಚಿವರುಗಳಾದ ವೆಂಕಟೇಶ್ . ಹೆಚ್ ಸಿ ಮಹದೇವಪ್ಪ ,ಶಾಸಕರಾದ ಎಮ್ ಆರ್ ಮಂಜುನಾಥ್ . ಪುಟ್ಟರಂಗಶೆಟ್ಟಿ. ಅಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.