Breaking News

ಉಗ್ರವಾದವನ್ನು ಬುಡ ಸಮೇತ ಕಿತ್ತು ಹಾಕಲು ದೇಶವೇ ಒಂದಾಗಿ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಕರೆ .

CM Siddaramaiah calls on the country to stand united to uproot terrorism.

IMG 20250424 WA0172

ವರದಿ : ಬಂಗಾರಪ್ಪ .ಸಿ .‌
ಹನೂರು :ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಇಲಾಖೆಗಳ 3,647 ಕೋಟಿ ವೆಚ್ಚದ ಯೋಜನೆಗಳಿಗೆ ಸಂಪುಟ ಅಸ್ತು: ಉಗ್ರವಾದ ಕಿತ್ತು ಹಾಕಲು ದೇಶವೇ ಒಂದಾಗಿ ನಿಲ್ಲುವಂತೆ ಸಿಎಂ ಕರೆ ನೀಡಿದರು.

ಸಂಪುಟ ಸಭೆ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಸಂಪುಟ ಸಭೆ ಆರಂಭಕ್ಕೂ ಮುನ್ನ ಉಗ್ರದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸಲಿದ್ದು, ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು” ಎಂದು ತಿಳಿಸಿದರು.
ಈ ಸಂಪುಟ ಸಭೆಯಲ್ಲಿ 78 ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, 3647.62 ಕೋಟಿ ಅನುದಾನವನ್ನು ಸಂಪುಟ ಅನುಮೋದನೆ ನೀಡಿದೆ. ಗಡಿಜಿಲ್ಲೆಯಲ್ಲಿ ಮಾನವ – ಆನೆ ಸಂಘರ್ಷ ತಡೆಗೆ 210 ಕೋಟಿ ರೂ‌. ಕುಡಿಯುವ ನೀರಿನ ಯೋಜನೆಗೆ 315 ಕೋಟಿ ರೂ‌., ಕೊಳ್ಳೇಗಾಲದಲ್ಲಿ ಉಪವಿಭಾಗ ಆಸ್ಪತ್ರೆಯು ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆ ಮಾಡಿ 250 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಣಯ, ಹನೂರಿನಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣ, ಚಿಕ್ಕಲ್ಲೂರಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಅಭಿವೃದ್ಧಿ ಪ್ರಾಧಿಕಾರ ಪ್ರಾರಂಭಿಸಲು ತೀರ್ಮಾನ ಮಾಡಿರುವುದಾಗಿ” ಸಿಎಂ ಹೇಳಿದರು.
“ಮೈಸೂರಿನ ಇಲವಾಲದಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ನಮ್ಮ ಸರ್ಕಾರ ಸ್ಥಳ ನೀಡಲಿದ್ದು ಅಲ್ಲಿ ಕ್ರಿಕೆಟ್ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗಲಿದೆ, ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿಗೆ ಬದನವಾಳುವಿಗೆ 40 ಕೋಟಿ ಅನುದಾನ, ಮೈಸೂರು ವಿಮಾನ ನಿಲ್ದಾಣದ ರನ್​ ವೇ ವಿಸ್ತರಣೆಗೆ ಜಾಗ ಖರೀದಿಸಿ ಕೊಡುವುದು, ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿಯನ್ನು 37 ಕೋಟಿ ಖರ್ಚು ಮಾಡಿ ಮ್ಯೂಸಿಯಂ ಆಗಿ ಪರಿವರ್ತನೆ, ಚಾಮರಾಜನಗರದಲ್ಲಿ ನೂತನ ಪ್ರವಾಸಿ ಮಂದಿರ ಸ್ಥಾಪನೆ, ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ. 15 ಕೋಟಿ ಅನುದಾನದಲ್ಲಿ ಚಾಮರಾಜನಗರ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಮಾಡಲು ಸಂಪುಟ ಒಪ್ಪಿಗೆ ಕೊಟ್ಟಿದೆ” ಎಂದು ಉತ್ತರಿಸಿದರು.
ಇದೇ ಸಂದರ್ಭದಲ್ಲಿ ಡಿಸಿ ಎಮ್ ಡಿ ಕೆ ಶಿವಕುಮಾರ್ . ಸಚಿವರುಗಳಾದ ಹೆಚ್ ಕೆ ಪಾಟೀಲ್ . ವೆಂಕಟೇಶ್ .ಎಮ್ ಕೆ ಸುಧಾಕರ್ . ಶಾಸಕರುಗಳಾದ ಎಆರ್ ಕೆ . ಪುಟ್ಟರಂಗಶೇಟ್ಟಿ. ಎಮ್ ಆರ್ ಮಂಜುನಾಥ್ ,ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಈ ಸಂದರ್ಭ ಉಗ್ರದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳಿಗೆ 3,647 ಕೋಟಿ ರೂ. ಅನುಮೋದನೆ ನೀಡಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಂಪುಟ ಸಭೆ ಬಳಿಕ, ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಸಂಪುಟ ಸಭೆ ಆರಂಭಕ್ಕೂ ಮುನ್ನ ಉಗ್ರದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸಲಿದ್ದು, ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು” ಎಂದು ತಿಳಿಸಿದರು.
ಈ ಸಂಪುಟ ಸಭೆಯಲ್ಲಿ 78 ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, 3647.62 ಕೋಟಿ ಅನುದಾನವನ್ನು ಸಂಪುಟ ಅನುಮೋದನೆ ನೀಡಿದೆ. ಗಡಿಜಿಲ್ಲೆಯಲ್ಲಿ ಮಾನವ – ಆನೆ ಸಂಘರ್ಷ ತಡೆಗೆ 210 ಕೋಟಿ ರೂ‌. ಕುಡಿಯುವ ನೀರಿನ ಯೋಜನೆಗೆ 315 ಕೋಟಿ ರೂ‌., ಕೊಳ್ಳೇಗಾಲದಲ್ಲಿ ಉಪವಿಭಾಗ ಆಸ್ಪತ್ರೆಯು ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆ ಮಾಡಿ 250 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಣಯ, ಹನೂರಿನಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣ, ಚಿಕ್ಕಲ್ಲೂರಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಅಭಿವೃದ್ಧಿ ಪ್ರಾಧಿಕಾರ ಪ್ರಾರಂಭಿಸಲು ತೀರ್ಮಾನ ಮಾಡಿರುವುದಾಗಿ” ಸಿಎಂ ಹೇಳಿದರು.
“ಮೈಸೂರಿನ ಇಲವಾಲದಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ನಮ್ಮ ಸರ್ಕಾರ ಸ್ಥಳ ನೀಡಲಿದ್ದು ಅಲ್ಲಿ ಕ್ರಿಕೆಟ್ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗಲಿದೆ, ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿಗೆ ಬದನವಾಳುವಿಗೆ 40 ಕೋಟಿ ಅನುದಾನ, ಮೈಸೂರು ವಿಮಾನ ನಿಲ್ದಾಣದ ರನ್​ ವೇ ವಿಸ್ತರಣೆಗೆ ಜಾಗ ಖರೀದಿಸಿ ಕೊಡುವುದು, ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿಯನ್ನು 37 ಕೋಟಿ ಖರ್ಚು ಮಾಡಿ ಮ್ಯೂಸಿಯಂ ಆಗಿ ಪರಿವರ್ತನೆ, ಚಾಮರಾಜನಗರದಲ್ಲಿ ನೂತನ ಪ್ರವಾಸಿ ಮಂದಿರ ಸ್ಥಾಪನೆ, ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ. 15 ಕೋಟಿ ಅನುದಾನದಲ್ಲಿ ಚಾಮರಾಜನಗರ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಮಾಡಲು ಸಂಪುಟ ಒಪ್ಪಿಗೆ ಕೊಟ್ಟಿದೆ” ಎಂದು ಉತ್ತರಿಸಿದರು.
ಇದೇ ಸಂದರ್ಭದಲ್ಲಿ ಡಿಸಿ ಎಮ್ ಡಿ ಕೆ ಶಿವಕುಮಾರ್ . ಸಚಿವರುಗಳಾದ ಹೆಚ್ ಕೆ ಪಾಟೀಲ್ . ವೆಂಕಟೇಶ್ .ಹೆಚ್ ಸಿ ಮಹಾದೇವಪ್ಪ ಎಮ್ ಕೆ ಸುಧಾಕರ್ . ಶಾಸಕರುಗಳಾದ ಎಆರ್ ಕೆ . ಪುಟ್ಟರಂಗಶೇಟ್ಟಿ. ಎಮ್ ಆರ್ ಮಂಜುನಾಥ್ ,ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.