Meaningful Guru Vandana program. Tribute to Huchamma Chaudhary, land donor of Kalkeri village, Koppal

ಸಿರುಗುಪ್ಪ… ನಗರದ ಎಸ್ ಇ ಎಸ್ ಶಿಕ್ಷಕರ ತರಬೇತಿ ಕೇಂದ್ರದಲ್ಲಿ 2006 ರಿಂದ 2007ರವರೆಗೆ ತರಬೇತಿ ಪಡೆದ ಪ್ರ ಶಿಕ್ಷಣಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಸಂಸ್ಥೆಯ ಅಧ್ಯಕ್ಷ ಬಿ ಈ ಅವಿನಾಶ್. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವಾಗುವುದು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯಂತ ಮಹತ್ವದ್ದಾಗಿದ್ದು ವಿಶೇಷವಾಗಿ ಪ್ರಾಥಮಿಕ ಹಂತದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲೆ ಅವಲಂಬಿತವಾಗಿದ್ದು ವಿದ್ಯಾರ್ಥಿಗಳ ಬದುಕಿಗೆ ತಂದೆ ತಾಯಿ ಬಳಿಕ ಆ ಸ್ಥಾನವನ್ನು ಗುರುಗಳು ಅಲಂಕರಿಸುತ್ತಾರೆ ಎಂಬ ಅಭಿಪ್ರಾಯವನ್ನು ಹಂಚಿಕೊಂಡರು. ಹಳೆಯ ವಿದ್ಯಾರ್ಥಿಗಳಾದ ಸೌಮ್ಯ ಕೆ. ಜಡೇಶ ಶ್ರೀಧರ್ ಬಸವರಾಜ ಮಲ್ಲೇಶ್ ಇತರರು ತಮ್ಮ ಹಳೆಯ ಸವಿ ನೆನಪುಗಳನ್ನು ಹಂಚಿಕೊಂಡರು. ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಮಹಮ್ಮದ್ ಫಯಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ ತಾವು ತರಬೇತಿ ಪಡೆದ ಶಿಕ್ಷಣ ಸಂಸ್ಥೆಯ ಉಪನ್ಯಾಸಕರುಗಳಿಗೆ ಹಳೆಯ ವಿದ್ಯಾರ್ಥಿಗಳೆಲ್ಲರೂ ಸೇರಿ ಗುರುವಂದನ ಮೂಲಕ ಗೌರವಿಸುತ್ತಿರುವುದು ಸಂತಸದಾಯಕವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸರಕಾರಿ ಶಾಲೆಗೆ ಎರಡು ಎಕರೆ ತಮ್ಮ ಭೂಮಿಯನ್ನು ದೇ ಣಿಗೆ ನೀಡಿದ ಕೊಪ್ಪಳ ಜಿಲ್ಲೆಯ ಕಲಕೇರಿ ಗ್ರಾಮದ ಶಿಕ್ಷಣ ಪ್ರೇಮಿ ಹುಚ್ಚಮ್ಮ ಚೌಧರಿ ಅವರಿಗೆ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಹಾಗೆ ಕಲಿಸಿದ ಗುರುಗಳಿಗೆ ಹಳೆ ವಿದ್ಯಾರ್ಥಿಗಳು ಪುಷ್ಪಾರ್ಚನೆ ನಡೆಸುವುದರ ಮೂಲಕ ವೇದಿಕೆಗೆ ಆಹ್ವಾನಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಅವರಿಂದ ಆಶೀರ್ವಾದ ಪಡೆದುಕೊಳ್ಳಲಾಯಿತು. 40ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸೌಮ್ಯ ಹಾಗೂ ಅಮೃತೇಶ್ವರಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರು