Breaking News

AIADMK’ ಅಖಿಕ ಭಾರತ ಸಾರ್ವತ್ರಿಕ ಮುಷ್ಕರದಪೂರ್ವಭಾವಿ ಸಭೆ

AIADMK’s All India General Strike Preparatory Meeting

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾವತಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳ ವಿರುದ್ಧ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ, ದುಡಿಯುವ ಜನರ ಹಕ್ಕುಗಳಿಗಾಗಿ ಎಅಖಿU ಕರೆಯ ಮೇರೆಗೆ ೨೦.೦೫.೨೦೨೫ ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಅದರ ಭಾಗವಾಗಿ ಮೇ-೦೯ ಶುಕ್ರವಾರ ಗಂಗಾವತಿ ನಗರದ ತುಳಸಪ್ಪ ಛತ್ರದ ಹತ್ತಿರ ಪೂರ್ವಭಾವಿ ಸಭೆ ನಡೆಸಲಾಯಿತು ಎಂದು ಂIಅಅಖಿUನ ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ AIADMK’s ರಾಜ್ಯ ಅಧ್ಯಕ್ಷರಾದ ಕಾ|| ಪಿ.ಪಿ.ಅಪ್ಪಣ್ಣ ಅವರು ಕಾರ್ಮಿಕರ ಎಂಟು ಗಂಟೆಗಳ ಕೆಲಸದ ಅವಧಿ, ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು, ಆರೋಗ್ಯದ ಹಕ್ಕು, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತ್ರಿಪಡಿಸಬೇಕು. ನೂತನ ಶಿಕ್ಷಣ ನೀತಿ ೨೦೨೦ ಹಾಗೂ ದಿನದ ಕೆಲಸದ ಅವಧಿ ೧೨ ಗಂಟೆಗೆ ವಿಸ್ತರಣೆ ಹಾಗೂ ರಾತ್ರಿ ಪಾಳೆಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡಿ ಕಾರ್ಖಾನೆ ಕಾಯ್ದೆಗೆ ಮಾಡಿರುವ ತಿದ್ದುಪಡಿ ಹಾಗೂ ನಿಶ್ಚಿತ ಕಾಲಾವಧಿ ಕಾರ್ಮಿಕ(ಈಖಿಇ) ನೇಮಕಕ್ಕೆ ಅವಕಾಶ ನೀಡುವ ಮಾದರಿ ಸ್ಥಾಯಿ ಆದೇಶಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು ಹಾಗೂ ಇತರೆ ಬೇಡಿಕೆಗಳನ್ನು ಇಟ್ಟುಕೊಂಡು ಇಡಿ ದೇಶಾದ್ಯಂತ ನಡೆಸುವ ಸಾರ್ವತ್ರಿಕ ಮುಷ್ಕದರಲ್ಲಿ ತಾವೆಲ್ಲರೂ ಭಾಗವಹಿಸಿ ಹೋರಾಟವನ್ನು ಯಶಸ್ವಿಗೋಳಿಸಬೇಕು ಎಂದರು.
ಈ ಪೂರ್ವಭಾವಿ ಸಭೆಯಲ್ಲಿ ಸಣ್ಣ ಹನುಮಂತಪ್ಪ ಹುಲಿಹೈದರ, ಪರಶುರಾಮ, ಕೇಶವ ನಾಯ್ಕ, ಡಬ್‌ಡಬ್ ಹನುಮಂತಪ್ಪ, ಮಾಯಮ್ಮ, ಬಾಬರ್, ರಮೇಶ ಕೆ., ಅಮೀರ್ ಅಲಿ, ಪಾರ್ವತಮ್ಮ, ಗಾಲಿ ಹುಲಿಗೆಮ್ಮ, ಇಂದ್ರಮ್ಮ, ಕೊಟ್ರೇಶ, ದುರುಗಪ್ಪ, ಹುಲ್ಲೇಶ ಭಾಗ್ಯನಗರ, ದುರುಗಪ್ಪ ಕಾರಟಗಿ, ರವಿ ಕಾರಟಗಿ ಜೊತೆಗೆ ಪೌರಕಾರ್ಮಿಕರು, ವಾಹನ ಚಾಲಕರು, ಕಟ್ಟಡ ಕಾರ್ಮಿಕರು ಇತರೆ ಕಾರ್ಮಿಕರು ಭಾಗವಹಿಸಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *