Congress should put factional differences aside and prepare for midterm elections: Bharadwaj

ಗಂಗಾವತಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿರುವುದಕ್ಕೆ ಕರ್ನಾಟಕ ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಗಂಗಾವತಿ ಕ್ಷೇತ್ರಕ್ಕೆ ಮಧ್ಯಂತರ ಚುನಾವಣೆ ಅನಿವಾರ್ಯವಾಗಿದೆ. ಈ ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಒಳಪಂಗಡಗಳ ವೈಷಮ್ಯಗಳನ್ನು ಬದಿಗಿಟ್ಟು, ಒಗ್ಗಟ್ಟಾಗಿ ಚುನಾವಣೆಗೆ ತಯಾರಿ ನಡೆಸಬೇಕು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ೨ ವರ್ಷಗಳಿಗಿಂತ ಹೆಚ್ಚು ಶಿಕ್ಷೆಯಾದರೆ ಜನಪ್ರತಿನಿಧಿಗಳ ಸ್ಥಾನ ಅನರ್ಹಗೊಳಿಸಬೇಕು. ಅದರಂತೆ ಕರ್ನಾಟಕ ರಾಜ್ಯ ಸರ್ಕಾರ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿರುವುದು ಸ್ವಾಗತಾರ್ಹವಾಗಿದ್ದು, ಆರು ತಿಂಗಳೊಳಗೆ ಗಂಗಾವತಿ ಕ್ಷೇತ್ರದ ಮಧ್ಯಂತರ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನೊಂದಿಗೆ ಸ್ಪರ್ಧಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಕ್ರಾಂತಿಚಕ್ರ ಬಳಗ ಕಾಂಗ್ರೆಸ್ ಪಕ್ಷಕ್ಕೆ ಒತ್ತಾಯಿಸಿದೆ.