Breaking News

ಹೃದಯ ವಿದ್ರಾವಕ ಘಟನೆ: ತಾಳಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ವರನಿಗೆ ಹೃದಯಾಘಾತ!

Heartbreaking incident: Groom suffers heart attack just minutes after tying the knot!

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಮಖಂಡಿ: ಕಳೆದ ಕೆಲವು ವರ್ಷಗಳಲ್ಲಿ, ವಯಸ್ಸಾದವರು ಮಾತ್ರವಲ್ಲದೆ ಯುವಕರು ಸಹ ಹೃದಯಾಘಾತ ಅಥವಾ ಹೃದಯ ಸ್ತಂಭನಕ್ಕೆ ಬಲಿಯಾಗುತ್ತಿರುವುದನ್ನು ನಾವು ನೋಡಿದ್ದೇವೆ.

ಇದೀಗ ಹೊಸ ಬದುಕು ಪ್ರಾರಂಭಿಸಬೇಕಾಗಿದ್ದ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಮಖಂಡಿ ನಗರದಲ್ಲಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯಲ್ಲಿ ಹೃದಯ ಕಲುಕಿದ ದುರ್ಘಟನೆ ನಡೆದಿದೆ. ಮದುವೆಯಾಗಿ ಹೊಸ ಜೀವನ ಶುರು ಮಾಡುವ ಕನಸು ಕಂಡಿದ್ದ ಯುವಕ ಪ್ರವೀಣ ಕುರಣಿ ಮಂಟಪದಲ್ಲೇ ಕೊನೆಯುಸಿರೆಳೆದಿದ್ದಾನೆ.

ಮನ ಮೆಚ್ಚಿದ ಹುಡುಗಿಗೆ ತಾಳಿ ಕಟ್ಟಿದ್ದ ಪ್ರವೀಣ ಕುರಣಿ, ಆರತಕ್ಷತೆಯಲ್ಲಿ ನಿಲ್ಲುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಜಮಖಂಡಿ ನಗರದ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.

ಪ್ರವೀಣ, ರಾಜ್ಯ ಸೈಕ್ಲಿಂಗ್ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ಮೂಲತಃ ಕುಂಬಾರಹಳ್ಳಿ ಗ್ರಾಮದ ಕುರಣಿ ಕುಟುಂಬದವರಾಗಿದ್ದಾರೆ. ಇಂದು ಜಮಖಂಡಿ ನಗರದಲ್ಲಿರುವ ಮನೆಯಲ್ಲಿ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು. ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು.

ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೆ ಯಾರೂ ಊಹಿಸದ ದುರ್ಘಟನೆ ನಡೆದಿದೆ. ಹಠಾತ್ ಹೃದಯಾಘಾತಕ್ಕೆ ವರ ಪ್ರವೀಣ್ ಸಾವನ್ನಪ್ಪಿದ್ದಾನೆ.

ಕುಸಿದು ಬಿದ್ದ ಬಳಿಕ ಮಾತನಾಡದೆ ಇರುವುದನ್ನ ಗಮನಿಸಿ ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿ ಪ್ರವೀಣ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಇದರ ಬೆನ್ನಲ್ಲಿಯೇ ಪೋಷಕರ‌ ಆಕ್ರಂದನ ಮುಗಿಲು ಮುಟ್ಟಿದೆ

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *