Breaking News

ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀ ಗುರುಸ್ವಾಮೀಜಿಗಳು ಲಿಂಗೈಕ್ಯರಾದರು

Sri Guruswamiji of Salur Brihanmatha on Male Mahadeshwara Hill became a transgender

ಜಾಹೀರಾತು
Screenshot 2025 05 20 18 34 55 70 6012fa4d4ddec268fc5c7112cbb265e7


ವರದಿ : ಬಂಗಾರಪ್ಪ .ಸಿ.
ಹನೂರು :ಪ್ರಸಿದ್ದ ಯಾತ್ರ ಕ್ಷೇತ್ರವಾದ ಶ್ರೀ
ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ 17ನೇ ಪೀಠಾಧ್ಯಕ್ಷರಾದ ಶ್ರೀ ಗುರುಸ್ವಾಮೀಜಿ ಇಂದು ಸಾಲೂರು ಮಠದಲ್ಲಿ ಲಿಂಗೈಕ್ಯರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀ ಪಟ್ಟದ ಗುರುಸ್ವಾಮೀಜಿ ಮಂಗಳವಾರ ಮುಂಜಾನೆ ಲಿಂಗೈಕ್ಯರಾಗಿದ್ದಾರೆ.

ಶ್ರೀ ಗುರುಸ್ವಾಮೀಜಿ ಅವರ ಪೂರ್ವಶ್ರಮವು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು ಪುಟ್ಟ ಮಾದಮ್ಮರ ಜೇಷ್ಠ ಪುತ್ರರಾಗಿ, 1956ರ ಆಗಸ್ಟ್ 2ರಂದು ಜನಿಸಿದ್ದರು. ನಂತರ ಸಾಲೂರು ಬೃಹನ್ಮಠಕ್ಕೆ ಇವರು 17ನೇ ಪೀಠಾಧ್ಯಕ್ಷರಾಗಿ 1995ರ ಜನವರಿ 29 ರಂದು ಪಟ್ಟಾಧಿಕಾರ ವಹಿಸಿಕೊಂಡಿದ್ದರು.

ಶ್ರೀ ಪಟ್ಟದ ಗುರುಸ್ವಾಮೀಜಿ ತಮ್ಮ 12ನೇ ವಯಸ್ಸಿನಲ್ಲಿ ಶ್ರೀಮಠಕ್ಕೆ ಬಂದು ಕಾಯ ವಾಚ, ಮಾನಸ ತ್ರಿಕರಣ ಶುದ್ದಿಯಿಂದ ಎಲೆಮರೆ ಕಾಯಿಯಂತೆ ದುಡಿದಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಶ್ರೀಮಠದಲ್ಲಿ ನಿತ್ಯ ದಾಸೋಹ ಸೇವೆ, ಶ್ರೀ ಮಹದೇಶ್ವರ ದೇವಸ್ಥಾನದ ಅಭಿವೃದ್ಧಿ, ಶ್ರೀ ಮಠದ ಅಭಿವೃದ್ಧಿ, ಅರ್ಚಕರ ಜೀವನ ಉದ್ದಾರ ಜೊತೆಗೆ ಶ್ರೀ ಸಾಲೂರು ಸ್ವಾಮಿ ಟ್ರಸ್ಟ್ ವತಿಯಿಂದ ಪೂನ್ನಾಚಿ ಗ್ರಾಮದಲ್ಲಿ ಎಲ್ಲಾ ವರ್ಗದ ಜನರಿಗೂ ಸೇರಿದಂತೆ, ದಿನದಲಿತರ ಹಿಂದುಳಿದವರ ಉಳಿವಿಗಾಗಿ ಪ್ರೌಢಶಾಲೆ ಮತ್ತು ಉಚಿತ ಹಾಸ್ಟೆಲ್ ಸ್ಥಾಪನೆ ಮಾಡಿದ್ದರು, 1999 ರಲ್ಲಿ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯದಲ್ಲಿ ಪ್ರೌಢಶಾಲೆ, ಹನೂರು ಹೊರವಲಯದಲ್ಲಿ ವೃದ್ಧರಿಗೆ ಆಶ್ರಯ ನೀಡಲು 10 ಎಕರೆ ಪ್ರದೇಶದಲ್ಲಿ ವೃದ್ಧಾಶ್ರಮವನ್ನು ಸ್ಥಾಪಿಸಿ ನೂರಾರು ನಿರಾಶ್ರಿತರಿಗೆ ಆಶ್ರಯ ನೀಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ಅನುಕೂಲವಾಗಲು ಸಂಸ್ಕೃತ ಪಾಠ ಶಾಲೆಗಳನ್ನು ತೆರೆದಿದ್ದಾರೆ. ಹಬ್ಬ ಜಾತ್ರೆ ಸಂದರ್ಭದಲ್ಲಿ ಸಹಸ್ರಾರು ಮಂದಿ ಭಕ್ತರು ಇಲ್ಲಿ ದಾಸೋಹ ಸ್ವೀಕರಿಸಲು ಅನುವು ಮಾಡಿಕೊಟ್ಟಿದ್ದರು.

ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶಿಷ್ಯರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಕಿರಿಯ ಶ್ರೀಗಳನ್ನಾಗಿ ಪಟ್ಟಾಭಿಷೇಕ ಮಾಡಿಸಿದ್ದರು. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಮಂಗಳವಾರದಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ.
ಇವರ ಅಂತ್ಯಕ್ರಿಯೆಯಲ್ಲಿ
ಸುತ್ತೂರು ಶ್ರೀ, ತುಮಕೂರು ಸಿದ್ದಗಂಗಾ ಮಠದ ಶ್ರೀಗಳ ಸಮ್ಮುಖದಲ್ಲಿ ಸಾಲೂರು ಬೃಹನ್ ಮಠದ ಆವರಣದಲ್ಲಿ ಸಂಜೆ 5 ಗಂಟೆಗೆ ಗುರುಸ್ವಾಮೀಜಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ‌ ಎಂದು ಮಠದ ಆಡಳಿತ ಮಂಡಳಿಯು ತಿಳಿಸಿದೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.