Breaking News

ಮುಂದುವರೆದ ತಾಪಂ ಕಚೇರಿಗೆ ಭೇಟಿ ಕಾರ್ಯಕ್ರಮ: ಜಿಪಂ ಸಿಇಓ ಬುಧವಾರ ಕಾರಟಗಿಯಲ್ಲಿ ಲಭ್ಯ

Visit program to Tamam office continued: GPAM CEO available in Karatagy on Wednesday

ಜಾಹೀರಾತು
Screenshot 2023 08 21 18 55 26 87 A23b203fd3aafc6dcb84e438dda678b6 264x300

ಕೊಪ್ಪಳ  ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಬರುವ ಬುಧವಾರ ಆಗಸ್ಟ್ 23ರಂದು ಕಾರಟಗಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನವಲಿ ರಸ್ತೆಯಲ್ಲಿರುವ ಕಾರಟಗಿ ತಾಲೂಕಿನ ತಾಪಂ ಕಾರ್ಯಾಲಯದಲ್ಲಿ ಹಾಜರಿದ್ದು ಕಾರಟಗಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಅಹವಾಲುಗಳ ಕುರಿತು ಚರ್ಚಿಸಲಿದ್ದಾರೆ. ಆದ್ದರಿಂದ ಕಾರಟಗಿ ತಾಲೂಕಿನ ವ್ಯಾಪ್ತಿಗೆ ಬರುವ ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳು ಜಿಪಂ ಸಿಇಓ ಅವರನ್ನು ಭೇಡಿ ಮಾಡಿ ತಮ್ಮ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ ಪಿ ಅವರು ತಿಳಿಸಿದ್ದಾರೆ.

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.