Breaking News

ಕ್ಷೇತ್ರದ ಅಭಿವೃದ್ದಿಗೆ ಇಂಧನ ಸಚಿವ ಕೆಜೆ ಜಾರ್ಜ ಸಕಾರಾತ್ಮಕ ಸ್ಪಂದನೆ : ಶಾಸಕ ಮಂಜುನಾಥ್.

Energy Minister KJ George’s positive response to the development of the sector: MLA Manjunath.

ಜಾಹೀರಾತು


ವರದಿ : ಬಂಗಾರಪ್ಪ ಸಿ ಹನೂರು

ಹನೂರು :ರಾಜ್ಯ ಸರ್ಕಾರದ ಇಂಧನ ಸಚಿವರಾದ ಕೆಜೆ ಜಾರ್ಜ್ರವರನ್ನು ಇಂದು ಬೆಂಗಳೂರಿನಲ್ಲಿ ಬೇಟಿ ಮಾಡಿದರ ಫಲವಾಗಿ ಹನೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಗಿ ಅವರು ಸಕರಾತ್ಮಕವಾಗಿ ಸ್ಪಂದಿಸಿದರು ಎಂದು ವಿಧಾನ ಸಭಾ ಕ್ಷೇತ್ರ ಶಾಸಕರಾದ ಎಂ ಆರ್ ಮಂಜುನಾಥ್ ತಿಳಿಸಿದರು . ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ಇಂಧನ ಸಚಿವರಿಗೆ ಮನವಿ ಮಾಡಲಾಗಿದೆ ,ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿನ ತೋಟದ ಜಮೀನುಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ಇರುವುದರಿಂದ ರೈತರು ಬೆಳೆದಿರುವ ಬೆಳೆಗಳು ಸಂಪೂರ್ಣ ಒಣಗಿ ಹೋಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಆದ್ದರಿಂದ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದೆನೆ ನನ್ನ ಮನವಿಗೆ ಸಚಿವ ಕೆಜೆ ಜಾರ್ಜ್ ರವರು ಉತ್ತಮ ಪ್ರತಿಕ್ರಿಯೆ ನೀಡಿದ್ದು ಅನ್ನ ನೀಡುವ ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ , ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಬಳಿ ಮಾಹಿತಿ ಪಡೆದು 6 ರಿಂದ 7 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು .

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.