
Progress review of implementation department officials


ನರೇಗಾ ಕಾಮಗಾರಿಗಳ ಸಮರ್ಪಕವಾಗಿ ಅನುಷ್ಠಾನಿಸಿ ತಾಪಂ ಇಓ ರಾಮರೆಡ್ಡಿ ಪಾಟೀಲ್ ಸೂಚನೆ
ಗಂಗಾವತಿ : ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ 2025-26 ನೇ ಸಾಲಿನ ಮಾನವ ದಿನಗಳ ಸೃಜನೆ ಗುರಿಯನ್ನು ತಲುಪಲು ಕಾರ್ಯ ಪ್ರವೃತ್ತರಾಗಿ ಕಾರ್ಯನಿರ್ವಹಿಸಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಅನುಷ್ಠಾನ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ನರೇಗಾ ಯೋಜನೆಯ ಕ್ರಿಯಾಯೋಜನೆ ಸಿದ್ಧಗೊಂಡಿದ್ದು, ಫಲಾನುಭವಿಗಳು ಸರಿಯಾಗಿ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಲು ಅಧಿಕಾರಿಗಳು, ಸಿಬ್ಬಂದಿಗಳು, ಮೇಲುಸ್ತುವಾರಿ ವಹಿಸಬೇಕು. ತೋಟಗಾರಿಕೆಯ ಬೆಳೆ, ರೇಷ್ಮೆ, ಕೃಷಿ ಇಲಾಖೆಯ ವೈಯಕ್ತಿಕ ಕಾಮಗಾರಿಗಳನ್ನು ಸರಿಯಗಿ ಅನುಷ್ಠಾನಿಸಬೇಕು. ನರೇಗಾ ಹಾಗೂ ಇಲಾಖೆಯ ಸೌಲಭ್ಯಗಳನ್ನು ರೈತಾಪಿ ವರ್ಗಕ್ಕೆ ತಲುಪಿಸುವ ಕೆಲಸ ಆಗಬೇಕು ಎಂದರು.
ಮಳೆಗಾಲ ಪ್ರಾರಂಭವಾಗಿದ್ದು ಅರಣ್ಯ & ತೋಟಗಾರಿಕೆ ಇಲಾಖೆಯವರು ಮುಂಗಾರು ಮುನ್ಸೂಚಿತ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮವಹಿಸಬೇಕು. ಕೃಷಿ ಇಲಾಖೆಯವರು ಬಿತ್ತನೆ ಬೀಜಗಳನ್ನು ರೈತಾಪಿ ವರ್ಗಕ್ಕೆ ಸಮರ್ಪಕವಾಗಿ ವಿತರಿಸಬೇಕು ಎಂದು ಸೂಚಿಸಿದರು.
ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಒಪ್ಪಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಸಂತೋಷ ಪಟ್ಟದಕಲ್ಲು, ವಲಯ ಅರಣ್ಯ ಅಧಿಕಾರಿಗಳಾದ ಬಿ.ರಾಘವೇಂದ್ರ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೇವಣ್ಣ ಕಟ್ಟಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರಾದ ಧರೆಪ್ಪ ಹೊನ್ನಮುಡೆ, ತೋಟಗಾರಿಕೆ ಇಲಾಖೆ ಎಡಿಎಚ್ ಶಿವಕುಮಾರ ಬಿ., ವಿಷಯ ನಿರ್ವಾಹಕರಾದ ಶಿವಮೂರ್ತಿ ಕಂಪಾಪೂರಮಠ, ನರೇಗಾ ಸಿಬ್ಬಂದಿಗಳು ಇದ್ದರು.




