Breaking News

ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ

Death of five tigers in Malemahadeshwar forest area: Poisoning suspected, minister orders investigation.

ಜಾಹೀರಾತು


ವರದಿ : ಬಂಗಾರಪ್ಪ .ಸಿ.
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಇದೇ ವಿಷಯವಾಗಿ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ ಐದು ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
5 ಹುಲಿಗಳ ಅಸಹಜ ಸಾವು
5 ಹುಲಿಗಳ ಅಸಹಜ ಸಾವು .
ಬುಧವಾರ ಸಂಜೆ ಅರಣ್ಯ ಸಿಬ್ಬಂದಿ ಗಸ್ತು ನಡೆಸುವಾಗ ಈ ಹುಲಿಗಳ ಅಸಹಜ ಸಾವನ್ನಪ್ಪಿರುವುದು ಗೊತ್ತಾಗಿದೆ. ಮೇಲ್ನೋಟಕ್ಕೆ ತಾಯಿ ಹುಲಿ ಮತ್ತು ಮರಿಗಳು ವಿಷಪ್ರಾಶನದಿಂದ ಅಸುನೀಗಿರುವ ಶಂಕೆ ವ್ಯಕ್ತವಾಗಿದೆ‌. ಹುಲಿಗಳು ಮೃತಪಟ್ಟ ಅಣತಿ ದೂರದಲ್ಲಿ ಹಸುವೊಂದರ ಕಳೇಬರ ಸಹ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಹುಲಿಗಳ ಸಾವಿಗೆ ಕಾರಣ ಸಂಶಯಾಸ್ಪದವಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಖಚಿತ ಕಾರಣ ತಿಳಿದು ಬರಲಿದೆ ಎಂದು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
“ಪ್ರಾಥಮಿಕ ವರದಿಗಳ ಪ್ರಕಾರ, ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಸತ್ಯಾಂಶ ಕಂಡುಹಿಡಿಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ” ಎಂದು ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು ತೀವ್ರ ದುಃಖಕರ. PCCF ನೇತೃತ್ವದ ತನಿಖಾ ತಂಡ ರಚಿಸಿ, 3 ದಿನಗಳಲ್ಲಿ ವರದಿ ಕೋರಲಾಗಿದೆ. ನಿರ್ಲಕ್ಷ್ಯವಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿಯೂ ಹುಲಿಗಳು ಸಾವಿಗೀಡಾಗಿದ್ದರೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಆದೇಶ ನೀಡಲಾಗಿದೆ.
ಗಂಭೀರವಾಗಿ ಪರಿಗಣಿಸಿದ ಸರ್ಕಾರ: ಹುಲಿಗಳ ಸಾವು ಪ್ರಕರಣದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ಅಂದು ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ್ದರು. ಇದರ ನಂತರ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 5 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ತಿಳಿಸಿದ್ದಾರೆ.
5 ಹುಲಿಗಳ ಅಸಹಜ ಸಾವು
5 ಹುಲಿಗಳ ಅಸಹಜ ಸಾವು
ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, 3 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸಬೇಕು. ತಂಡ ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯವಿದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷಪ್ರಾಶನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಸಚಿವರು ಸೂಚಿಸಿದ್ದಾರೆ.

About Mallikarjun

Check Also

ಕಂದಾಯ ದಿನಾಚರಣೆ ಕಾರ್ಯಕ್ರಮ

Revenue Day Program ಕೊಟ್ಟೂರು:. ತಾಲೂಕು ಕಛೇರಿ, ಈದಿನ ಕಂದಾಯ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಅಮರೇಶ್.ಜಿ.ಕೆ ಇವರು ಕಂದಾಯ ಇಲಾಖೆಯ …

Leave a Reply

Your email address will not be published. Required fields are marked *