Breaking News

ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಗೆ ಖಂಡನೆ– ವೆಲ್ಫೇರ್ ಪಾರ್ಟಿ ಮಹಿಳಾ ಘಟಕ

Welfare Party Women's Unit condemns Council Member Ravikumar's statement

ಬೆಂಗಳೂರು:  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಸಬಿಹಾ ಪಟೇಲ್ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರ ಬಗ್ಗೆ ಕಿಂಚಿತ್ತೂ ಗೌರವ ಕೊಡದ ರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಉತ್ತಾಯಿಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಜಾಹೀರಾತು

About Mallikarjun

Check Also

ತಂಬಾಕು ಮುಕ್ತ ಯುವ ಅಭಿಯಾನ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ

Quiz competition as part of the Tobacco Free Youth Campaign ಕೊಪ್ಪಳ ಅಕ್ಟೋಬರ್ 15 (ಕರ್ನಾಟಕ ವಾರ್ತೆ): …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.