Pre-meeting for massive health check-up camp in Sriramanagara a success

ಗಂಗಾವತಿ: ಲಯನ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಗಂಗಾವತಿ, ಐ.ಎಂ.ಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು, ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತಾಶ್ರಯದಲ್ಲಿ ಶ್ರೀರಾಮನಗರದ ಎ.ಕೆ.ಆರ್.ಡಿ ಪಿ.ಯು ಕಾಲೇಜ್ ಆವರಣದಲ್ಲಿ ಜುಲೈ-೧೬ ಬುಧವಾರ ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ಗಂಟೆಯವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ, ನೇತ್ರ ತಪಾಸಣಾ, ಹೃದಯರೋಗ, ನರಸಂಬಂಧಿ ಕಾಯಿಲೆಗಳಿಗೆ ಸಂಬಂಧಪಟ್ಟಂತೆ ತಪಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು,
ಈ ಸಂಬಂಧವಾಗಿ ನಡೆದ ಪೂರ್ವಭಾವಿ ಸಭೆಯನ್ನು ಶುಕ್ರವಾರ ಶ್ರೀರಾಮನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಯಿತು ಎಂದು ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ, ಶಿವಕುಮಾರ ಮಾಲಿಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿ, ಈ ಆರೋಗ್ಯ ಶಿಬಿರದ ಬಗ್ಗೆ ಮಾಹಿತಿ ನೀಡಿದರು.
ಲಯನ್ ಸುಬ್ರಹ್ಮಣ್ಯೇಶ್ವರರಾವ್ ಅವರು ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಕಾಡುತ್ತಿರುವ ಸ್ತನ ಕ್ಯಾನ್ಸರ್ ತಡೆಗಟ್ಟಲು ಮೆಮೋಗ್ರಾಫಿಯಿಂದ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆಯನ್ನು ಉಚಿತವಾಗಿ ಮಾಡಲಾಗುವುದು.
ಅಲ್ಲದೇ ಈ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು ಹಾಗೂ ಗಂಭೀರ ಕಾಯಿಲೆಗಳಾದ ಹೃದಯರೋಗ, ಕಣ್ಣಿನ ತಪಾಸಣೆ, ಸಕ್ಕರೆ ಕಾಯಿಲೆ, ಬಿ.ಪಿ., ದಂತಚಿಕಿತ್ಸೆ, ಎಲುಬು ಕೀಲು ಸಮಸ್ಯೆ, ಸ್ತ್ರೀರೋಗ ತಪಾಸಣೆ ಸೇರಿದಂತೆ ಮುಂತಾದ ಕಾಯಿಲೆಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುವುದು ಹಾಗೂ ಈ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ಹಾಗೂ ನೇತ್ರರೋಗಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗುವುದು ಎಂದರು.
ಈ ಸಭೆಯ ಅಧ್ಯಕ್ಷತೆಯನ್ನು ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿಯಾದ ಡಾ, ವೀರಾನಾಯಕ ವಹಿಸಿ ಮಾತನಾಡಿ, ನಮ್ಮ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಶಿಬಿರದ ಪ್ರಚಾರ ಹಾಗೂ ಜಾಗೃತಿಯನ್ನು ಆಶಾ ಕಾರ್ಯಕರ್ತೆಯರಿಂದ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದ ರಿಂದ ಮಾಡಲಾಗುವುದು ಎಂದರು.
ಲಯನ್ ಹರಿಬಾಬು ಅವರು ಮಾತನಾಡಿ, ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಲು ವಿನಂತಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಗಂಗಾವತಿ ಕಾರ್ಯದರ್ಶಿಯಾದ ಜಂಬಣ್ಣ ಐಲಿ, ಖಜಾಂಚಿಯಾದ ಶಿವಪ್ಪ ಗಾಳಿ, ಸದಸ್ಯರುಗಳಾದ ವೆಂಕಟ ರತ್ನಂ, ಸಿದ್ದಣ್ಣ ಜಕ್ಲಿ, ವೆಂಕಟೇಶ್ವರರಾವ್, ಸುಬ್ಬರಾಜು, ಶ್ರೀನಿವಾಸು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹಾಗೂ ಶ್ರೀರಾಮನಗರದ ಗಣ್ಯರು, ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು, ಶ್ರೀರಾಮನಗರ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ