Breaking News

ದೇವನಹಳ್ಳಿ ಭೂ ಹೋರಾಟ ಯಶಸ್ವಿ; ಕೊಪ್ಪಳದಲ್ಲಿ ವಿಜಯೋತ್ಸವದೇವನಹಳ್ಳಿ ರೀತಿ ಕೊಪ್ಪಳಕ್ಕೆ ಮುಕ್ತಿ ನೀಡಲು ಸಿಎಂಗೆ ಆ.೪ರ ಗಡುವು

Devanahalli land struggle successful; Victory in Koppal CM has deadline of August 4 to liberate Koppal like Devanahalli

ಕೊಪ್ಪಳ: ರಾಜ್ಯ ರಾಜಧಾನಿಯ ಹತ್ತಿರದ ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ ಲಭಿಸಿದ್ದಕ್ಕೆ ಇಲ್ಲಿನ ಅಶೋಕ ವೃತ್ತದಲ್ಲಿ ಕಾರ್ಖಾನೆ ವಿರೋಧಿ ಹೋರಾಟಗಾರರು, ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ, ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರು ವಿಜಯೋತ್ಸವ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಪ್ರಧಾನ ಸಂಚಾಲಕ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸುಮಾರು ೧೧೯೮ ದಿನಗಳ ಸುಧೀರ್ಘ ಹೋರಾಟದ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರೈತಪರ ಎಂಬ ಸಂದೇಶ ನೀಡಿದ್ದು ೧೭೭೭ ಎಕರೆ ಭೂಮಿಯ ಸ್ವಾಧೀನ ಕೈಬಿಟ್ಟಿರುವದು ಸ್ವಾಗತಾರ್ಹ. ಅದರಂತೆ ಕೊಪ್ಪಳ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಕಾರ್ಖಾನೆ, ಅಭಿವೃದ್ಧಿ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವದು ಸಹ ಕೈಬಿಡಬೇಕು. ಕೃಷಿ ಭೂಮಿ ಉಳಿಯಬೇಕು, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ತೆಗೆಯಬೇಕು. ದೇವನಹಳ್ಳಿ ಮಾದರಿಯಲ್ಲಿ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಮೋಸದಿಂದ ಬಂದಿರುವ ಹೆಸರು ಬದಲಿಸಿಕೊಂಡು ಉರಿಯುತ್ತಿರುವ ಬಲ್ಡೋಟಾದ ಬಿಎಸ್‌ಪಿಎಲ್ ಕಾರ್ಖಾನೆ ಸೇರಿದಂತೆ ಜನರಿಗೆ ಮಾರಕವಾಗಿರುವ ಎಲ್ಲಾ ಕಂಪನಿಗಳನ್ನು ಕೊಪ್ಪಳ ಬಿಟ್ಟು ತೊಲಗಿಸಬೇಕು ಎಂದು ಮನವಿ ಮಾಡಿದರು.
ಮುಖಂಡರಾದ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಬರುವ ಆಗಷ್ಟ್ ೪ ರಂದು ನಗರಕ್ಕೆ ಸಿದ್ದರಾಮಯ್ಯನವರು ಆಗಮಿಸುತ್ತಿದ್ದು ಅಂದು ಅವರು ಬಲ್ಡೋಟಾ ಹಾಗೂ ಕಿರ್ಲೋಸ್ಕರ್ ವಿಸ್ತೀರ್ಣಕ್ಕೆ ನೀಡಿರುವ ಅನುಮತಿಯನ್ನು ಅಧಿಕೃತವಾಗಿ ರದ್ದುಗೊಳಿಸಿ ಆದೇಶ ನೀಡಿದರೆ ಅವರ ಜನ್ಮದಿನವನ್ನು ಇಲ್ಲಿನ ಜನರೇ ದೊಡ್ಡಮಟ್ಟದಲ್ಲಿ ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಇನ್ನು ದೇವನಹಳ್ಳಿಯ ಹೋರಾಟ ರಾಜ್ಯಕ್ಕೆ ಮಾದರಿಯಾಗಿದ್ದು, ೧೨ ವರ್ಷ ಇಲ್ಲದ ಕಾಳಜಿ ಮತ್ತು ಪ್ರೀತಿ ಕಾರ್ಖಾನೆಗಳಿಗೆ ಈಗ ಉಕ್ಕಿ ಹರಿಯುತ್ತಿದೆ, ಅವರ ಆಸೆ ಆಮಿಷಗಳಿಗೆ ಜನ ಬಲಿಯಾಗುವದಿಲ್ಲ, ಅವರ ವಿರುದ್ಧ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತದೆ, ಕಾರ್ಖಾನೆಗಳ ಕಪಟ ಪರಿಸರ ಪ್ರೇಮ ನಮಗೆ ಗೊತ್ತಿದೆ ಎಂದರು.
ಚಳುವಳಿ ಮುಖಂಡ ಬಸವರಾಜ ಶೀಲವಂತರ ಮಾತನಾಡಿ, ಸಿದ್ದರಾಮಯ್ಯ ಅವರ ದೇವನಹಳ್ಳಿ ಭೂಮಿ ರೈತರಿಗೆ ಬಿಡುವ ನಿರ್ಣಯವನ್ನು ಸ್ವಾಗತಿಸುತ್ತೇವೆ, ಅದೇ ರೀತಿ ನಮ್ಮಲ್ಲೂ ಮಾಡಲಿ, ಕಾರ್ಖಾನೆ ವಿರೋಧಿ ಹೋರಾಟಗಾರರ ಮನವಿ ಆಲಿಸಿ, ಕೊಪ್ಪಳಕ್ಕೆ ಬರುವ ಮುನ್ನವೇ ಕಾರ್ಖಾನೆ ರದ್ದುಗೊಳಿಸಿದ ಬಗ್ಗೆ ಆದೇಶ ನೀಡಿ ಬರಲಿ ಎಂದರು.
ಹಿರಿಯ ಪತ್ರಕರ್ತ ಸೋಮರಡ್ಡಿ ಅಳವಂಡಿ, ಸಂಘಟಕರಾದ ಕೆ. ಬಿ. ಗೋನಾಳ, ಮಹಾಂತೇಶ ಕೊತಬಾಳ, ಶರಣು ಗಡ್ಡಿ, ಭೀಮಸೇನ ಕಲಕೇರಿ, ತಿಪ್ಪಯ್ಯಸ್ವಾಮಿ ಹೊಲಗೇರಿ, ಕನಕಪ್ಪ ಪೂಜಾರ, ಬಂದೇನವಾಜ್ ಮಣಿಯಾರ, ಗಾಳೆಪ್ಪ ಮುಂಗೋಲಿ, ಕಾಶಿಮ್ ಸರ್ದಾರ, ನಾಗರಾಜ್ ಜಿ., ಮಕ್ಬೂಲ್ ರಾಯಚೂರು, ಪರಶುರಾಮ ವಣಗೇರಿ ಇಂದರಗಿ, ಮುತ್ತುರಾಜ್ ಹಡಪದ, ಗವಿಸಿದ್ದಪ್ಪ ಹಲಿಗಿ ಕುಣಿಕೇರಿ, ರಮೇಶ ಬೂದಗುಂಪಿ, ಮುದುಕಪ್ಪ ಹೊಸಮನಿ, ಆನಂದ ಗೊಂಡಬಾಳ, ಗವಿಸಿದ್ದಪ್ಪ ಹಂಡಿ ಇತರರು ಇದ್ದರು.

ಜಾಹೀರಾತು

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.