K. Raghavendra Hitnal is the
ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ.

ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು. ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ, ಬಳ್ಳಾರಿ ಉಪ-ವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದರು. ಕೆಎಂಎಫ್‌ನ ಮಾಜಿ ಅಧ್ಯಕ್ಷ ಭೀಮನಾಯ್ಕ ಚುನಾವಣೆಯಿಂದ ದೂರ ಉಳಿದದ್ದು ಕಂಡು ಬಂದಿತು. ಒಕ್ಕೂಟದ ಒಟ್ಟು ೧೨ ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ ೭ ಮತ್ತು ಭೀಮನಾಯ್ಕ ೫ ನಿರ್ದೇಶಕರ ಬಲ ಹೊಂದಿದ್ದರು.