Breaking News

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

Journalist H. Mallikarjuna receives Madhyamik Shri Award

ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ ಮಲ್ಲಿಕಾರ್ಜುನರವರು ಮಾಧ್ಯಮ ಶ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದ್ದು, ಜುಲೈ-೩೧ ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಸಂಘದ ಉದ್ಘಾಟನೆ ಜೊತೆಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಪತ್ರಕರ್ತರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಂ.ರಾಜಶೇಖರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ.
ಕಾಡುಸಿದ್ದೇಶ್ವರ ಸಂಸ್ಥಾನ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರರು, ಅವಧೂತ ವಿನಯ್ ಗುರೂಜಿ, ಹೊರನಾಡು ಕ್ಷೇತ್ರದ ಡಾ. ಭೀಮೇಶ್ವರ ಜೋಷಿ ಸಾನಿಧ್ಯವಹಿಸುವರು. ರಾಜ್ಯದ ಮಂತ್ರಿಗಳು ಸೇರಿದಂತೆ ನಾಡಿನ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಾಹೀರಾತು

About Mallikarjun

Check Also

ಎಸ್ಸಿ ಎಸ್ಟಿ ಮೀನುಗಾರರಿಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Applications invited for subsidy for SC/ST fishermen to purchase vehicles ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.