Revered Dr. Sharanabasavappa Appaji's health condition is stable
ಕಲಬುರಗಿ; ಶುಕ್ರವಾರ ರಾತ್ರಿ ಉಸಿರಾಟದ ಸೋಂಕಿನ ದೂರುಗಳೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಶೀಘ್ರವಾಗಿ ಸಾಮಾನ್ಯ ಸ್ಥಿತಿಗೆ ಚೇತರಿಸಿಕೊಳ್ಳುತ್ತಿದ್ದಾರೆ.

ಡಾ. ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ ಎಂದು ಹೇಳಿದೆ.
ಆಸ್ಪತ್ರೆಯಲ್ಲಿ ಡಾ. ಅಪ್ಪಾಜಿ ಅವರೊಂದಿಗಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರು ಪೂಜ್ಯ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸಾಮಾನ್ಯ ಸ್ಥಿತಿಗೆ ಸುಧಾರಿಸುತ್ತಿದೆ ಎಂದು ತಿಳಿಸಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಪೂಜ್ಯ ಡಾ. ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದರಿಂದ ಶರಣಬಸವೇಶ್ವರ ಸಂಸ್ಥಾನದ ಭಕ್ತರು ಭಯಭೀತರಾಗಬಾರದು ಮತ್ತು ಡಾ. ಅಪ್ಪಾಜಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹರಡಿರುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.