The inauguration program of "Green Campus Clean Campus" was successfully held at Christaraja Educational Institution.

ವರದಿ : ಬಂಗಾರಪ್ಪ .ಸಿ .
ಹನೂರು :ನಿನ್ನೆ ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹನೂರು ಬಫರ್ ವಲಯದ ವಲಯ ಅರಣ್ಯ ಅಧಿಕಾರಿಗಳಾದ ಉಮಾಪತಿ ಕೆ ರವರು ಆಗಮಿಸಿ, ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಈ ನಿಟ್ಟಿನಲ್ಲಿ ಕ್ರಿಸ್ತರಾಜ ವಿದ್ಯಾಸಂಸ್ಥೆ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ವಂದನೀಯ ಫಾದರ್ ರೋಷನ್ ರವರು ಇದೊಂದು ವೈಚಾರಿಕ ಹಾಗೂ ವೈಜ್ಞಾನಿಕ ಕಾರ್ಯಕ್ರಮ ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಪರಿಸರದ ಬಗ್ಗೆ ಕಾಳಜಿ ವಹಿಸಿಕೊಂಡು ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮತ್ತೊಬ್ಬ ಅತಿಥಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ಹನೂರು ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ಮಹೇಶ್ ರವರು ಭಾಗವಹಿಸಿದ್ದರು.
ಕಾಲೇಜು ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅರಿವು ಮೂಡಿಸುವ ಪಥ ಸಂಚಲನ, ಪರಿಸರದ ಬಗ್ಗೆ ಅರಿವು ಮೂಡಿಸುವ ನಾಟಕ, ನೃತ್ಯ ಪ್ರದರ್ಶನ ಹಾಗೂ ವಿವಿಧ ಕಲಾ ತಂಡಗಳು ನೆರೆದಿದ್ದವರ ಕಣ್ಮನ ಸೆಳೆದವು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಶಾಂತಿ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ, ಸಿಸ್ಟರ್ ಜೆಸಿಂತಾ ಗಲ್ಬವೋ, ಪುಷ್ಪ ಸಗಾಯ ಉಪನ್ಯಾಸಕರು , ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.