Journalist Sharanegowda passes away, celebrities offer condolences.

ಕಾರಟಗಿ: ಗೊರೇಬಾಳ ಗ್ರಾಮದ ನಿವಾಸಿ ಪತ್ರಕರ್ತ ಶರಣೇಗೌಡ ಗೊರೇಬಾಳ(54) ಸೋಮವಾರ ಮಧ್ಯಾನ್ಹ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವಿದೆ. ಗೊರೇಬಾಳ ಗ್ರಾಮದಲ್ಲಿ ಮಂಗಳವಾರ ಒಂದು ಗಂಟೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲ ತಿಳಿಸಿದೆ.
ಮೃತರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ, ಸಿಂಧನೂರಿನ ಶಾಸಕ ಹಂಪನಗೌಡ ಬಾದಲರ್ಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಬಸವರಾಜ ದಢೇಸೂಗೂರು ಹಾಗೂ ಹಾಲು ಒಕ್ಕೂಟ್ಟದ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಪ್ರಮುಖರು,ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ತೀವ್ರ ಸಂತಾಪ ಸೂಚಿಸಿದ್ದಾರೆ
Kalyanasiri Kannada News Live 24×7 | News Karnataka
