May Raksha Bandhan remain bright in Indian culture, Mallikarjun Bichchagal,

ಕಾರಟಗಿ: ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ವಿದ್ಯಾರ್ಥಿZನಿcಯರಿಂದ ಮತ್ತು ಶಿಕ್ಷಕಿಯರಿಂದ ಕಾರಟಗಿ ನಗರದ ವಿವಿಧ ಗ್ಯಾರೇಜ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಕ್ಯಾನಿಕ್ ರವರು ಹಾಗೂ ಗ್ಯಾರೇಜ್ ಕಾರ್ಮಿಕರಿಗೆ ಅತ್ಯಂತ ಸಂಭ್ರಮ ಸಡಗರದಿಂದ ರಕ್ಷಾ ಬಂಧನ ಸಂಕೇತವಾಗಿ ರಾಖಿ ಗಳನ್ನು ಕಟ್ಟಿ ಸಿಹಿ ತಿನ್ನಿಸಿ ಆರತಿ ಬೆಳಗುವುದರ ಮೂಲಕ ಶುಭಾಶಯಗಳು ಕೋರಿದರು. ರಕ್ಷಾ ಬಂಧನ ರಾಖಿ ಕಟ್ಟಿಸಿಕೊಂಡಿರುವ ಗ್ಯಾರೇಜ್ ಮೆಕ್ಯಾನಿಕ್ ರವರು ರಾಖಿ ಕಟ್ಟಿರುವ ಮುದ್ದು ಮಕ್ಕಳಿಗೆ ಸಹೋದರಿಯರಿಗೆ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಬಿಚ್ಚಗಲ್, ಮಾತನಾಡಿ ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.
ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ ಎಂದರು ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಹನುಮಂತಪ್ಪ ವಿಟಿ ಹಾಗೂ ಶಾಲೆಯ ಸರ್ವ ಶಿಕ್ಷಕರ ಸಿಬ್ಬಂದಿ ವರ್ಗದವರು ಶಾಲಾ ಮಕ್ಕಳು ಹಾಜರಿದ್ದರು