Breaking News

ಜನತಾ ನ್ಯಾಯಾಲಯ ಕುರಿತು ಜಾಗೃತಿ ಕಾರ್ಯಕ್ರಮ

Awareness program on Janata Court
Screenshot 2025 08 13 19 55 47 07 6012fa4d4ddec268fc5c7112cbb265e72547438145827673623 1024x443

ಖಾಯಂ ಜನತಾ ನ್ಯಾಯಾಲಯದ ಉಪಯೋಗ ಪಡೆದುಕೊಳ್ಳಿ  ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹೇಳಿಕೆ

ಜಾಹೀರಾತು

ಗಂಗಾವತಿ : ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ಒಂದು ವ್ಯವಸ್ಥೆ ಖಾಯಂ ಜನತಾ ಅದಾಲತ್ ಆಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಹೇಳಿದರು.

ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ತಾಲೂಕು ಪಂಚಾಯತ್ ಗಂಗಾವತಿ, ಪೊಲೀಸ್ ಇಲಾಖೆ, ಸಿಡಿಪಿಓ, ಗ್ರಾಪಂ ವಡ್ಡರಹಟ್ಟಿ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಖಾಯಂ ಜನತಾ ನ್ಯಾಯಾಲಯ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದೆ. ಇಂದು ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಕ್ಕೆ ಬರುತ್ತಾರೆ. ಜನರ ಕ್ಲಿಷ್ಟಕರ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು, ಸುಲಭ ಪ್ರಕ್ರಿಯೆಗಳ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು. ನ್ಯಾಯಾಂಗದ ಉದ್ದೇಶವಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಕಾನೂನು ಪ್ರತಿಯೊಬ್ಬರಿಗೂ ಮುಟ್ಟಬೇಕು. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಕೀಲರ ಸಂಘದ ತಾಲೂಕು ಕಾರ್ಯದರ್ಶಿಗಳಾದ ಎಚ್.ಎಂ.ಮಂಜುನಾಥ ಅವರು ಉಪನ್ಯಾಸ ನೀಡಿ, 1987ರ ಕಾನೂನು ಸೇವೆ ಪ್ರಾಧಿಕಾರ ಕಾಯ್ದೆ ಪ್ರಕಾರ ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುತ್ತಿದ್ದರು. ಅದರ ಮುಂದುವರೆದ ಭಾಗವಾಗಿ 2007 ರಲ್ಲಿ ರಾಜ್ಯ ಸರಕಾರ ಕಾಯ್ದೆ ತಿದ್ದುಪಡಿ ತಂದು, ಖಾಯಂ ಜನತಾ ನ್ಯಾಯಾಲಯ ಸ್ಥಾಪಿಸಿದೆ. ಸಾರ್ವಜನಿಕ ಉಪಯುಕ್ತ ಸೇವೆಗಳ ವ್ಯಾಜ್ಯ ಬಂದಲ್ಲಿ ನ್ಯಾಯಾಲಯಕ್ಕೆ ಹೋಗದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸಿದರೆ ಮೂರು ತಿಂಗಳಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸುತ್ತಾರೆ. ಸಾರ್ವಜನಿಕರು ಇದರ ಉಪಯೂಗ ಪಡೆದುಕೊಳ್ಳಬೇಕು ಎಂದರು.

ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ಹತ್ತಿಮರದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾ.ಕಾ.ಸೇ ಸಮಿತಿ ತಾಲೂಕು ಅಧ್ಯಕ್ಷರಾದ ಗುಡ್ಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮೇಘಾ ಸೋಮಣ್ಣನವರ್, ತಹಸೀಲ್ದಾರ್ ರವಿ ಅಂಗಡಿ, ತಾ.ಪಂ. ಇಓ ರಾಮರೆಡ್ಡಿ ಪಾಟೀಲ್, ಸಿಡಿಪಿಓ ಜಯಶ್ರೀ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ, ವಕೀಲರ ಸಂಘದ ತಾಲೂಕು ಅಧ್ಯಕ್ಷರಾದ ಶರಣಬಸಪ್ಪ ನಾಯಕ, ಉಪಾಧ್ಯಕ್ಷರಾದ ಪ್ರಕಾಶ ಕುಸಬಿ, ಗ್ರಾಪಂ ಸರ್ವ ಸದಸ್ಯರು, ಗ್ರಾಪಂ ಸಿಬ್ಬಂದಿಗಳು ಇದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.