Breaking News

18 ಗ್ರಾಪಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ನೇರಪ್ರಸಾರ ಕಾರ್ಯಕ್ರಮ

Grilahakshmi Yojana launch live program in 18 villages

ಜಾಹೀರಾತು

ಇಓ ಶ್ರೀಮತಿ ಲಕ್ಷ್ಮೀದೇವಿ ಮಾಹಿತಿ

ಗಂಗಾವತಿ : ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಆ.30 ರಂದು ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ತಾಲೂಕಿನ 18 ಗ್ರಾಮ ಪಂಚಾಯತ್ ಗಳಲ್ಲಿ ಸಾರ್ವಜನಿಕರು, ಫಲಾನುಭವಿಗಳ ವೀಕ್ಷಣೆಗೆ ನೆರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ತಿಳಿಸಿದರು.

ತಾಲೂಕು ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಫಲಾನುಭವಿಗಳು ಮುಖ್ಯಂಮತ್ರಿಗಳ ಜೊತೆ ಅಭಿಪ್ರಾಯ ಹಂಚಿಕೊಳ್ಳಲು ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ವಡ್ಡರಹಟ್ಟಿ ಕ್ಯಾಂಪ್ ನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಾಳೆ ಬೆಳಗ್ಗೆ 12 ರಿಂದ 2 ಗಂಟೆಯವರೆಗೆ ನಡೆಯುವ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶಿವರಾಜ ತಂಗಡಗಿ, ಶಾಸಕರಾದ ಮಾನ್ಯ ಜನಾರ್ಧನ ರೆಡ್ಡಿ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

About Mallikarjun

Check Also

ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ,ಶಿರಸ್ತೇದಾರ ರವಿಕುಮಾರ್ ನಾಯಕವಾಡಿ ಸಲಹೆ

Include the name in the voter list, Chief Ravikumar suggested ಜಿಎಚ್ ಎನ್ ಕಾಲೇಜಿನಲ್ಲಿ ಮತದಾರ ಪಟ್ಟಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.