Breaking News

ವಡ್ಡರಹಟ್ಟಿ ಗ್ರಾಮಕ್ಕೆ ಜಿಪಂ ಸಿಇಓ ಶ್ರೀ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ, ಸಿದ್ಧತಾ ಕಾರ್ಯ ವೀಕ್ಷಣೆ

GPM CEO Shri Rahul Ratnam Pandey visited Vaddarahatti village and observed the preparatory work

ಜಾಹೀರಾತು

ಗಂಗಾವತಿ : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆ ಕುರಿತು ಫಲಾನುಭವಿಗಳು ಅಭಿಪ್ರಾಯ ಹಂಚಿಕೊಳ್ಳಲು ಆಯ್ಕೆಯಾದ ವಡ್ಡರಹಟ್ಟಿ ಗ್ರಾಮಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೆಯ ಅವರು ಮಂಗಳವಾರ ಭೇಟಿ ನೀಡಿ ಸಿದ್ಧತಾ ಕಾರ್ಯ ವೀಕ್ಷಣೆ ಮಾಡಿದರು. ನಂತರ ಅವರು ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಫಲಾನುಭವಿಗಳು ಮಾನ್ಯ ಮುಖ್ಯಮಂತ್ರಿಗಳ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ವೀಕ್ಷಣೆಗೆ ಗ್ರಾಪಂ ಮಟ್ಟದಲ್ಲಿ ಟಿ.ವಿ./ಎಲ್ ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮಕ್ಕೆ ಆಗಮಿಸಿ ನೇರಪ್ರಸಾರ ವೀಕ್ಷಣೆ ಮಾಡಬೇಕು ಎಂದರು. ಈ ವೇಳೆ, ತಹಸೀಲ್ದಾರರಾದ ಶ್ರೀ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ತಾಪಂ ಸಹಾಯಕ ನಿರ್ದೇಶಕರಾದ ಶ್ರೀ ಮಹಾಂತಗೌಡ ಪಾಟೀಲ್, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಕಾಶೀನಾಥ ಹಂಚಿನಾಳ, ಕಾರ್ಯದರ್ಶಿಗಳಾದ ಈಶಪ್ಪ, ಡಿ.ಪಿ.ಎಂ. ರಾಜೇಶ, ತಾಪಂ ಸಿಬ್ಬಂದಿಗಳಾದ ನಾಗರಾಜ ಗಂಗನಾಳ, ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಗ್ರಾಪಂ ಸರ್ವ ಸದಸ್ಯರು, ಸಿಬ್ಬಂದಿಗಳು ಇದ್ದರು.

About Mallikarjun

Check Also

ಶ್ರೀ ಗವಿಸಿದ್ಧೇಶ್ವರ ನರ್ಸಿಂಗ್ ಕಾಲೇಜಿಗೆ ೧೦೦% ಉತ್ತಮ ಫಲಿತಾಂಶ

100% excellent results for Sri Gavisiddheshwara Nursing College ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ದಕ ಟ್ರಸ್ಟನ ಶ್ರೀ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.