Awareness program on Janata Adalat in Chiklajantakal

ಗಂಗಾವತಿ : ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ಒಂದು ವ್ಯವಸ್ಥೆ ಖಾಯಂ ಜನತಾ ಅದಾಲತ್ ಆಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಹೇಳಿದರು.
ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಪಂಚಾಯತ್ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ತಾಲೂಕು ಪಂಚಾಯತ್ ಗಂಗಾವತಿ, ಪೊಲೀಸ್ ಇಲಾಖೆ, ಸಿಡಿಪಿಓ, ಗ್ರಾಪಂ ಚಿಕ್ಕಜಂತಕಲ್ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಖಾಯಂ ಜನತಾ ನ್ಯಾಯಾಲಯ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದೆ. ಇಂದು ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಯಕ್ಕೆ ಬರುತ್ತಾರೆ. ಜನರ ಕ್ಲಿಷ್ಟಕರ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು, ಸುಲಭ ಪ್ರಕ್ರಿಯೆಗಳ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು. ನ್ಯಾಯಾಂಗದ ಉದ್ದೇಶವಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಕಾನೂನು ಪ್ರತಿಯೊಬ್ಬರಿಗೂ ಮುಟ್ಟಬೇಕು ಎಂದರು.
ವಕೀಲರ ಸಂಘದ ತಾಲೂಕು ಕಾರ್ಯದರ್ಶಿಗಳಾದ ಎಚ್.ಎಂ.ಮಂಜುನಾಥ ಅವರು ಉಪನ್ಯಾಸ ನೀಡಿ, 1987ರ ಕಾನೂನು ಸೇವೆ ಪ್ರಾಧಿಕಾರ ಕಾಯ್ದೆ ಪ್ರಕಾರ ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುತ್ತಿದ್ದರು. ಅದರ ಮುಂದುವರೆದ ಭಾಗವಾಗಿ 2007 ರಲ್ಲಿ ರಾಜ್ಯ ಸರಕಾರ ಕಾಯ್ದೆ ತಿದ್ದುಪಡಿ ತಂದು, ಖಾಯಂ ಜನತಾ ನ್ಯಾಯಾಲಯ ಸ್ಥಾಪಿಸಿದೆ. ಸಾರ್ವಜನಿಕ ಉಪಯುಕ್ತ ಸೇವೆಗಳ ವ್ಯಾಜ್ಯ ಬಂದಲ್ಲಿ ನ್ಯಾಯಾಲಯಕ್ಕೆ ಹೋಗದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸಿದರೆ ಮೂರು ತಿಂಗಳಲ್ಲಿ ವ್ಯಾಜ್ಯ ಇತ್ಯರ್ಥ ಪಡಿಸುತ್ತಾರೆ. ಸಾರ್ವಜನಿಕರು ಇದರ ಉಪಯೂಗ ಪಡೆದುಕೊಳ್ಳಬೇಕು ಎಂದರು.
ಗ್ರಾಪಂ ಅಧ್ಯಕ್ಷರಾದ ನೇತ್ರಾವತಿ ವೆಂಕೋಬಾ ಭಂಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾ.ಕಾ.ಸೇ ಸಮಿತಿ ತಾಲೂಕು ಅಧ್ಯಕ್ಷರಾದ ಗುಡ್ಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮೇಘಾ ಸೋಮಣ್ಣನವರ್, ತಹಸೀಲ್ದಾರ್ ರವಿ ಅಂಗಡಿ, ಪಿಎಸ್ ಐ ರಂಗಪ್ಪ ದೊಡ್ಮನಿ, ಸಿಡಿಪಿಓ ಜಯಶ್ರೀ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ ಕಡಿವಾಳರ್, ಮುಸ್ಟೂರು ಪಿ.ಎಚ್. ಸಿ. ವೈದ್ಯಾಧಿಕಾರಿಗಳಾದ ಶೇರಿನಾ ಪಾತೀಮಾ, ಗ್ರಾಪಂ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ವಕೀಲರ ಸಂಘದ ತಾಲೂಕು ಅಧ್ಯಕ್ಷರಾದ ಶರಣಬಸಪ್ಪ ನಾಯಕ, ಉಪಾಧ್ಯಕ್ಷರಾದ ಪ್ರಕಾಶ ಎಂ. ಕುಸುಬಿ, ಗ್ರಾಪಂ ಸರ್ವ ಸದಸ್ಯರು, ಗ್ರಾಪಂ ಸಿಬ್ಬಂದಿಗಳು ಇದ್ದರು.