District level guarantee scheme progress review meeting on August 29
ಕೊಪ್ಪಳ ಆಗಸ್ಟ್ 2 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.