Breaking News

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Students protest under the leadership of AIDSSO, condemning the confusion in the appointment of guest lecturers
Screenshot 2025 09 04 18 22 58 06 6012fa4d4ddec268fc5c7112cbb265e76255789124236214951 1024x731

ಕೊಪ್ಪಳ: ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.

ಜಾಹೀರಾತು

ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಖಂಡಿಸಿ ಕೊಪ್ಪಳ ನಗರದ ಅಶೋಕ ವೃತ್ತದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಹಯ್ಯಾಳಪ್ಪ ಮಾತನಾಡಿ,
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಆಗ್ರಹಿಸಿದರು.
ನಂತರ ಎಐಡಿಎಸ್ಓ ರಾಜ್ಯ ಸಮಿತಿ ಸದಸ್ಯೆ ಸಿಂಧು.ಕೆ ಮಾತನಾಡಿ ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಸಮಸ್ಯೆಯನ್ನು ಹಾಗೂ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವು ಈ ಕೂಡಲೇ ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಪರವಾಗಿ ಆಗ್ರಹಿಸಿದರು. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಈ ವೇಳೆ ಜಿಲ್ಲಾ ಕಾರ್ಯಕರ್ತರಾದ ಪ್ರದೀಪ್, ಶರಣಪ್ಪ, ಅಪ್ಪಾಜಿ, ತಿರುಪತಿ, ವಿದ್ಯಾರ್ಥಿಗಳಾದ ರುಕ್ಸನಾ ಬೇಗಂ, ಸಾವಿತ್ರಿ,ತುಳಸಿ,ಆಕಾಶ್, ಹುಲಿಗಮ್ಮ,ಲಕ್ಷ್ಮಿ,ನೇತ್ರಾ, ದರ್ಶನ್, ಮಲ್ಲಪ್ಪ, ಸಂತೋಷ್ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.