Yuvanidhi Yojana: Candidates advised to check original documentsಕೊಪ್ಪಳ ಸೆಪ್ಟೆಂಬರ್ 09, (ಕರ್ನಾಟಕ ವಾರ್ತೆ): ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಡಿ.ಡಿ.ಪಿ.ಆಯ್ ಇಲಾಖೆಯಲ್ಲಿ ಎಸ್.ಎಸ್.ಎಲ್.ಸಿ, ಡಿ.ಡಿ.ಪಿ.ಯು ಇಲಾಖೆಯಲ್ಲಿ ಪಿ.ಯು.ಸಿ ಮತ್ತು ಡಿ.ಇ.ಇ.ಓ ಇಲಾಖೆಯಲ್ಲಿ ಡಿಪ್ಲೊಮಾ, ಪದವಿ ಮೂಲ ಅಂಕಪಟ್ಟಿಗಳೊAದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿಸಿಕೊಳ್ಲುವಂತೆ ಸೂಚಿಸಲಾಗಿದೆ.
ಈ ಮೂರು ಇಲಾಖೆಗಳು ಜಿಲ್ಲಾಡಳಿತ ಭವನ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತವೆ. ತಮ್ಮ ಅರ್ಜಿಯ ಪ್ರಸ್ತುತ ಸ್ಥಿತಿಯನ್ನು ತಿಳಿದುಕೊಳ್ಳಲು ಸೇವಾ ಸಿಂಧು ಪೋರ್ಟ್ಲ್‌ನ ಯುವನಿಧಿ ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮೂಲಕ ತಾವೇ ಖುದ್ದಾಗಿ ಪರಿಶೀಲಿಸಿಕೊಳ್ಳಬಹುದು.
ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ನಿಗದಿಯಾಗಿರುವುದಿಲ್ಲ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ಚಾಲನೆಯಲ್ಲಿರುತ್ತದೆ. ಆದಕಾರಣ 2023, 2024, 2025ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ http://sevasindhugs.karnataka.gov.in ಮೂಲಕ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯ ಬದಲಾಗಿ, ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ: 1800 599 7154 ನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮೂರು ಇಲಾಖೆಗಳು ಜಿಲ್ಲಾಡಳಿತ ಭವನ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತವೆ. ತಮ್ಮ ಅರ್ಜಿಯ ಪ್ರಸ್ತುತ ಸ್ಥಿತಿಯನ್ನು ತಿಳಿದುಕೊಳ್ಳಲು ಸೇವಾ ಸಿಂಧು ಪೋರ್ಟ್ಲ್‌ನ ಯುವನಿಧಿ ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮೂಲಕ ತಾವೇ ಖುದ್ದಾಗಿ ಪರಿಶೀಲಿಸಿಕೊಳ್ಳಬಹುದು.
ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ನಿಗದಿಯಾಗಿರುವುದಿಲ್ಲ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ಚಾಲನೆಯಲ್ಲಿರುತ್ತದೆ. ಆದಕಾರಣ 2023, 2024, 2025ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ http://sevasindhugs.karnataka.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ: 1800 599 7154 ನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka