Breaking News

ನಾಗಪುರದ ದೀಕ್ಷಾ ಭೂಮಿ ಯಾತ್ರೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Nagpur’s Deeksha Bhoomi Yatra: Application submission period extended

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 10, (ಕರ್ನಾಟಕ ವಾರ್ತೆ): ಅಕ್ಟೋಬರ್ 2 ರಂದು ಮಹಾರಾಷ್ಟçದ ನಾಗಪುರದಲ್ಲಿ ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರವರ್ತನಾ ದಿನದಲ್ಲಿ(ವಿಜಯ ದಶಮಿ ದಿನದಂದು) ಪಾಲ್ಗೊಳ್ಳುವ ಅನುಯಾಯಿಗಳಿಗೆ ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್  https://swd.karnataka.gov.in     ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಸೆ.9 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಸದ್ಯ ಇಲಾಖೆಯ ಆಯುಕ್ತರ ನಿರ್ದೇಶನದನ್ವಯ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.15 ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *