Planting program in the name of mother as part of Poshan month celebrations




ಕೊಪ್ಪಳ ಸೆಪ್ಟೆಂಬರ್ 12, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಶುಕ್ರವಾರದಂದು ಕೊಪ್ಪಳ ಯೋಜನೆಯ ವದಗನಾಳ 1ನೇ ಅಂಗನವಾಡಿ ಕೇಂದ್ರದಲ್ಲಿ 8 ನೇ ರಾಷ್ಟಿçÃಯ ಪೋಷಣ್ ಮಾಸಾಚರಣೆಯ ಅಂಗವಾಗಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಪ್ರತಿ ವರ್ಷ ಪೋಷಣ್ ಮಾಸಾಚರಣೆ ಕಾರ್ಯಕ್ರವನ್ನು ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಾಹೆವಾರು ಮಾಡುವರು. ಕಾರ್ಯಕ್ರಮದ ಉದ್ದೇಶ ಪೌಷ್ಠಿಕ ಆಹಾರ ಸೇವನೆ ಮುಖ್ಯ ಎಂಬುದರ ಕುರಿತು ಜಾಗೃತಿ ಮೂಡಿಸುವುದು. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯತೆ ಕಂಡುಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೋಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ ಗದ್ದಿ, ಶಾಲಾ ಮುಖ್ಯೋಪಾಧ್ಯಾಯರು, ಗ್ರಾಮ ಪಂಚಾಯತಿ ಸದಸ್ಯರು, ಗರ್ಭಿಣಿ, ಬಾಣಂತಿಯರು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.