
Special felicitation to State Committee Member Shri H. Mallikarjuna, Hosakera
ಗಂಗಾವತಿ:ದಿ,22-9-2025 ಸೋಮವಾರ ನಗರದ ಐಎಂಎ ಭವನದಲ್ಲಿ ನಡೆದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಪತ್ರಿಕಾ ದಿನಾಚರಣೆ ಆಚರಣೆ ಹಾಗು ತಾಲುಕು ಘಟಕ ಪದಗ್ರಹಣ ಸಮಾರಂಭ ದ ಕಾರ್ಯಕ್ರಮ ದಲ್ಲಿ ರಾಜ್ಯ ಸಮಿತಿ ಸದಸ್ಯ ಶ್ರೀ ಹೆಚ್. ಮಲ್ಲಿಕಾರ್ಜುನ, ಹೊಸಕೇರಾಇವರಿಗೆವಿಶೇಷಸನ್ಮಾಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶ್ರೀ ರಾಜಶೇಖರ, ಮಾಜಿ ಶಾಸಕ ಪರಣ್ಣ ಮುನವಳ್ಳಿಯವರು, ನಗರಸಭೆಯ ಅಧ್ಯಕ್ಷೆಯಾದ ಶ್ರೀಮತಿ ಹೀರಾಬಾಯಿ ಸಿಂಗ್, ಬಿಜೆಪಿ ಮುಖಂಡರಾದ ವಿರುಪಾಕ್ಷಪ್ಪ ಸಿಂಗನಾಳ, ಮಾಜಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ವಕೀಲರು, ಜಿ. ಶ್ರೀಧರ ಕೇಸರಹಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಬಿ ಖಾದ್ರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ. ನಟೇಶ್, ಆಟಲ್ ಹಾರ್ಟ್ಸ್ ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲ, ಹಿರಿಯ ಕಾರ್ಮಿಕ ಮುಖಂಡ ಜೆ. ಭಾರದ್ವಾಜ್, ಕಾಂಗ್ರೆಸ್ ಮುಖಂಡ ಎಸ್.ಬಿ ಖಾದ್ರಿ. ಕನ್ನಡಪರ ಸಂಘಟನೆ ಮುಖಂಡ ಸೈಯ್ಯದ್ ಜಿಲಾನಿ ಪಾಷಾ ಖಾದ್ರಿ, ದಲಿತಪರ ಸಂಘಟನೆಗಳ ಮುಖಂಡರಾದ ಹುಲುಗಪ್ಪ ಮಾಗಿ, ಹಂಪೇಶ ಹರಿಗೋಲು, ಶಂಕರ್, ಹುಸೇನಪ್ಪ ಹಂಚಿನಾಳ, ಮಂಜುನಾಥ ಕಳ್ಳಿಮನಿ ಸೇರಿದಂತೆ ಇನ್ನಿತರರು ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡಿದರು.
ಈ ಸಂರ್ಧದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ವಸಂತಕುಮಾರ, ರಾಜ್ಯ ಪದಾಧಿಕಾರಿಯಾದ ಪ್ರಶಾಂತ್ ರವರು ಹಾಗೂ ರಾಜ್ಯ ಸಮಿತಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಹೊಸಕೇರಾ, ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ, ಶಿವಕುಮಾರ ಮಾಲಿಪಾಟೀಲ್ ಉಪಸ್ಥಿತರಿದ್ದರು.
ಶಿಕ್ಷಕರಾದ ಶಿವಾನಂದ ತಿಮ್ಮಾಮರ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ರಮೇಶ ಕೋಟಿ ಸ್ವಾಗತಿಸಿದರೆ. ಜೆ. ಶ್ರೀನಿವಾಸ ವಂದನಾರ್ಪಣೆ ಸಲ್ಲಿಸಿದರು.




