Breaking News

ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ  ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳಗಳ ಖರೀದಿಗೆಕ್ರಮವಹಿಸಿ :ಜಿಲ್ಲಾಧಿಕಾರಿ   ಡಾ. ಸುರೇಶ ಬಿ. ಇಟ್ನಾಳ ಸಲಹೆ

District Task Force Committee meeting: Take action to purchase various pulses under the support price scheme: District Magistrate Dr. Suresh B. Itna's advice

Screenshot 2025 09 25 17 52 57 03 E307a3f9df9f380ebaf106e1dc980bb67692974703611452907

ಕೊಪ್ಪಳ ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ): ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿ ಜೋಳ, ಕಿರು ಸಿರಿಧಾನ್ಯಗಳು, ಹೆಸರು ಮತ್ತು ರಾಗಿ, ಈ ಎಲ್ಲಾ ಬೆಳೆಗಳ ಖರೀದಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಬುಧವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿಗೆ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ (ಏಕ ರೂಪ ಪದ್ಧತಿಯಲ್ಲಿ) ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ವಿವಿಧ ಬೆಳಗಳ ಖರೀದಿಗಾಗಿ ಕರೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

2025-26 ನೇ ಸಾಲಿಗೆ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ (ಏಕ ರೂಪ ಪದ್ಧತಿಯಲ್ಲಿ) ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಭತ್ತ, ಬಿಳಿ ಜೋಳ, ಕಿರು ಸಿರಿಧಾನ್ಯಗಳು, ಹೆಸರು ಮತ್ತು ರಾಗಿ ಖರೀದಿ ಮಾಡುವ ಬಗ್ಗೆ ಸರ್ಕಾರದಿಂದ ಆದೇಶಗಳು ಬಂದಿವೆ. ಅದರನ್ವಯ ಆಹಾರ ಧಾನ್ಯಗಳನ್ನು ಖರೀದಿ ಪ್ರಕ್ರೀಯೆಯನ್ನು ಕೈಗೊಳ್ಳಬೇಕು. ಭತ್ತವನ್ನು ಪ್ರತಿ ರೈತರಿಂದ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಟ 50 ಕ್ವಿಂಟಲ್ ಭತ್ತವನ್ನು ಖರೀದಿಸಬೇಕು. ಭತ್ತವನ್ನು ಸರಬರಾಜು ಮಾಡಿದ ರೈತರ ಖಾತೆಗಳಿಗೆ ಹಣವನ್ನು ನೇರ ನಗದು ವರ್ಗಾವಣೆ ಮಾಡಬೇಕು. ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ, ಕಾರಟಗಿ, ಸಿದ್ದಾಪುರ, ಮರಳಿ, ವೆಂಕಟಗಿರಿ, ಕೊಪ್ಪಳ, ಹಿಟ್ನಾಳ ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆಯಲು ಕ್ರಮವಹಿಸುವಂತೆ ಸೆಪ್ಟೆಂಬರ್ 29 ರಿಂದ ರೈತರ ನೊಂದಣಿ ಕಾರ್ಯ ಆರಂಭಿಸುವಂತೆ ಕೆ.ಎಫ್.ಸಿ.ಎಸ್.ಸಿ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಿದರು.
ಅದರಂತೆ ಜೋಳ, ಕಿರು ಸಿರಿ ಧಾನ್ಯಗಳು, ರಾಗಿ ಖರೀದಿಗೂ ಸರ್ಕಾರದಿಂದ ಆದೇಶವಾಗಿದ್ದು, ಜಿಲ್ಲೆಯಲ್ಲಿ ಅಗತ್ಯಕ್ಕೆತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆದು, ರೈತರ ನೋಂದಣಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ಭತ್ತ ಮತ್ತು ಬಿಳಿ ಜೋಳ, ರಾಗಿ ಹಾಗೂ ಕಿರು ಸಿರಿ ದಾನ್ಯಗಳ ಖರೀದಿಗೆ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧಿಕೃತ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿ.ಎ.ಪಿ.ಸಿ.ಎಮ್.ಎಸ್., ಪಿ.ಎ.ಸಿ.ಎಸ್., ಎಫ್.ಪಿ.ಓ., ಎಸ್.ಹೆಚ್.ಜಿ ಮುಖಾಂತರ ಖರೀದಿಸಲು ಸರ್ಕಾರವು ಅನುಮೋದನೆ ನೀಡಿದ್ದು, ಆಯ್ಕೆ ಮಾಡುವಾಗ ಸರ್ಕಾರದ ಆದೇಶದಲ್ಲಿ ತಿಳಿಸಿರುವ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಮಾಡಬೇಕು. ಬೆಳೆಯ ಹಣವನ್ನು ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲು ಕ್ರಮವಹಿಸಬೇಕು. ಮುಂದೆ ಅವಶ್ಯಕತೆ ಬಂದರೆ, ಅಗತ್ಯವಿರುವಲ್ಲಿ ಖರೀದಿ ಕೇಂದ್ರ ತೆರೆಯಲು ಸಿದ್ದತೆಯಲ್ಲಿರಬೇಕು. ಖರೀದಿ ಏಜೆನ್ಸಿಗಳು ಕೇಂದ್ರ ಸರ್ಕಾರವು ನಿಗದಿಪಡಿಸಿದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಿ ಪ್ರತಿ ಕೇಂದ್ರದಲ್ಲಿ 3ನೇ ವ್ಯಕ್ತಿ ಗುಣಮಟ್ಟ ಪರೀಕ್ಷಕರನ್ನು ನೇಮಿಸಲು ಇಲಾಖೆಯು ನೀಡುವ ನಿರ್ದೇಶನದಂತೆೆ ಕ್ರಮವಹಿಸಬೇಕು ಎಂದರು.
ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನ್ಯೂನ್ಯತೆಗಳಿಗೆ ಅವಕಾಶ ಇಲ್ಲದಂತೆ ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಪೊಲೀಸ್ ಸಹಕಾರ ಪಡೆದು ಕಾರ್ಯನಿರ್ವಹಿಸಬೇಕು. ಎ.ಪಿ.ಎಮ್.ಸಿ.ಗಳಲ್ಲಿ ಕುಡಿಯುವ ನೀರು, ನೆರಳು ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಎಲ್ಲಾ ಖರೀದಿ ಏಜೆನ್ಸಿಗಳು ಸರ್ಕಾರದ ಆದೇಶದಂತೆ ಕ್ರಮವಹಿಸಬೇಕು. ಯಾವುದೇ ನ್ಯೂನ್ಯತೆಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ರೂ.2369 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ. 2389 ದರ ನಿಗದಿಪಡಿಸಿದ್ದು, ಅಗತ್ಯಕ್ಕೆತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಕ್ಟೋಬರ್ 31ರ ವರೆಗೆ ರೈತರ ನೋಂದಣಿ ನಡೆಯಲಿದೆ. ನವೆಂಬರ್ 1 ರಿಂದ 2026ರ ಫೆಬ್ರವರಿ 28ರವರೆಗೆ ಭತ್ತ ಖರೀದಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು.
ಹೈಬ್ರಿಡ್ ಬಿಳಿ ಜೋಳಕ್ಕೆ ರೂ. 3699 ಹಾಗೂ ಮಾಲ್ದಂಡಿ ಬಿಳಿ ಜೋಳಕ್ಕೆ ರೂ. 3749 ದರ ನಿಗದಿಪಡಿಸಲಾಗಿದ್ದು, 2025ರ ಡಿಸೆಂಬರ್ 1 ರಿಂದ 2026ರ ಮಾರ್ಚ್ 31ರ ವರೆಗೆ ರೈತರ ನೋಂದಣಿ ನಡೆಯಲಿದೆ. 2026ರ ಜನವರಿ 1 ರಿಂದ ಮಾರ್ಚ್ 31ರ ವರೆಗೆ ಜೋಳ ಖರೀದಿ ಕಾರ್ಯ ನಡೆಯಲಿದ್ದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಮತ್ತು ಕೊಪ್ಪಳದಲ್ಲಿ ಖರೀದಿ ಕೇಂದ್ರಗಳನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳ ಮುಖಾಂತರ ತೆರೆಯುವಂತೆ ಕ್ರಮವಹಿಸಿ. ಪ್ರತಿ ರೈತರಿಂದ ಎಕರೆಗೆ 15 ಕ್ವಿಂಟಲ್‌ನಂತೆ ಗರಿಷ್ಟ 150 ಕ್ವಿಂಟಲ್ ಬಿಳಿಜೋಳವನ್ನು ಖರೀದಿಸಲಾಗುವುದು ಎಂದು ಹೇಳಿದರು.
ಕಿರು ಸಿರಿ ಧಾನ್ಯಗಳ ಖರೀದಿಗೆ ಸಂಬಂಧಿಸಿದಂತೆ ಸಾಮೆ ಮತ್ತು ನವಣಿಗಳಿಗೆ ಪ್ರತಿ ಕ್ವೀಂಟಲ್‌ಗೆ ರೂ. 4686 ದರ ನಿಗದಿಪಡಿಸಿದ್ದು, ಅಕ್ಟೋಬರ್ 1 ರಿಂದ ಡಿಸೆಂಬರ್ 15ರವರೆಗೆ ರೈತರ ನೋಂದಣಿ ಕಾರ್ಯ ನಡೆಯಲಿದೆ. ಜನವರಿ 2026ರ 1 ರಿಂದ ಮಾರ್ಚ್ 31 ರವರೆಗೆ ಖರೀದಿ ಕಾರ್ಯವನ್ನು ಕೈಗೊಳ್ಳಲು ಸರ್ಕಾರದಿಂದ ಆದೇಶಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ, ಕನಕಗಿರಿ ಮತ್ತು ಕೊಪ್ಪಳದಲ್ಲಿ ಖರೀದಿ ಕೇಂದ್ರಗಳನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳ ಮುಖಾಂತರ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ರೈತರಿಂದ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಟ 50 ಕ್ವಿಂಟಲ್ ಕಿರು ಸಿರಿ ಧಾನ್ಯ (ಸಾಮೆ ಮತ್ತು ನವಣೆ)ನ್ನು ಖರೀದಿಸಲಾಗುವುದು ಎಂದರು.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯ ಕಾರಟಗಿ, ಗಂಗಾವತಿ, ಕೊಪ್ಪಳ ತಾಲ್ಲೂಕಿನಲ್ಲಿ ಭತ್ತ ಬೆಳೆಯುವ ಪ್ರದೇಶವಿದ್ದು, ಜಿಲ್ಲೆಯಲ್ಲಿ ಸೋನಾಮಸುರಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಫ್ರೂಟ್ ತಂತ್ರಾಂಶವು ಚಾಲ್ತಿಯಲ್ಲಿದ್ದು, ಹಾಲಿ ಇರುವ ಬೆಳೆಯ ಮಾಹಿತಿಯನ್ನು ಕಾಲೋಚಿತಗೊಳಿಸಬೇಕು. ಜಿಲ್ಲೆಯಲ್ಲಿ ರಾಗಿ ಬೆಳೆಯುವ ಪ್ರದೇಶವಿರುವುದಿಲ್ಲ. ಹಾಗಾಗಿ ರಾಗಿ ಖರೀದಿ ಕೇಂದ್ರ ತೆರೆಯುವ ಪ್ರಶ್ನೆ ಉದ್ಬವಿಸುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ ಜಿ. ಹಾಗೂ ಕೊಪ್ಪಳ ಎ.ಪಿ.ಎಂ.ಸಿ ಸಹಾಯಕ ನಿರ್ದೇಶಕರು, ವಿವಿಧ ತಾಲ್ಲೂಕುಗಳ ಎ.ಪಿ.ಎಂ.ಸಿ ಕಾರ್ಯದರ್ಶಿಗಳು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕರು, ಮಾರಾಟ ಮಂಡಳಿಗಳ ವ್ಯವಸ್ಥಾಪಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About Mallikarjun

Check Also

img202510021202142.jpg

ಸ್ವಾಭಿಮಾನಿ ಕಲ್ಯಾಣ ಪರ್ವ 12ನೇ ಶತಮಾನದ ಶರಣರ ಸ್ವಾಭಿಮಾನದ ಪ್ರತೀಕ

Swabhimani Kalyana Parva is a symbol of the self-respect of the 12th century Sharanas. ಹನ್ನೆರಡನೇ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.