Breaking News

ಅಂಜನಾದ್ರಿ ನಮ್ಮ ಭಾಗದಲ್ಲಿ ಪ್ರಸಿದ್ದ ಪ್ರವಾಸಿ ಸ್ಥಳವಾಗಿದೆ- ಜಿ. ಜನಾರ್ಧನ ರೆಡ್ಡಿ

Anjanadri is a famous tourist destination in our area - G. Janardhana Reddy

20250926 172747 Collage7526292258735323658

ಕೊಪ್ಪಳ ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ): ಆಂಜನೇಯ ಜನ್ಮಸ್ಥಳವಾದ ಅಂಜನಾದ್ರಿ ನಮ್ಮ ಭಾಗದ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು ಇದರ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನ ರೆಡ್ಡಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ ಪ್ರವಾಸೋಧ್ಯಮ ದಿನದ ಅಂಗವಾಗಿ ಆನೆಗೊಂದಿ ಗ್ರಾಮದ ಗಗನ್ ಮಹಲದಿಂದ ಅಂಜನಾದ್ರಿ ಬೆಟ್ಟದವರೆಗೆ ಹಮ್ಮಿಕೊಂಡಿದ್ದ “ಪ್ಲಾಗ ರನ್” ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆ ನನ್ನ ಇಷ್ಟದ ಇಲಾಖೆಯಾಗಿದೆ ನಾನು ಈ ಹಿಂದೆ ಪ್ರವಾಸೋದ್ಯಮ ಇಲಾಖೆಯ ಸಚಿವನಾಗಿದ್ದಾಗ ನಮ್ಮ ಭಾಗದಲ್ಲಿ 6 ಜಂಗಲ್ ಲಾಡ್ಜಗಳಿದ್ದವು 19 ಜಂಗಲ್ ಲಾಡ್ಜಗಳನ್ನು ಕಟ್ಟುವ ಕೆಲಸ ಮಾಡಿದೆ. ಹಂಪಿಯಲ್ಲಿ 500 ಕೋಟಿ ಅನುದಾನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಶೇ. 50 – 50ರ ಅನುಪಾತದಲ್ಲಿ ಹಂಪಿಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗಲು ಹಂಪಿ, ಹೊಸಪೇಟೆ, ಕಮಲಾಪುರ ತಿರುಗಾಡಲು ಬ್ಯಾಟರಿಚಾಲಿತ ಕಾರುಗಳ ಜೊತೆಗೆ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೆ. 350 ಎಕರೆ ಪ್ರದೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಜೂ ಪಾರ್ಕ ಮಾಡಲಾಯಿತು. ಪ್ರವಾಸೋದ್ಯಮ ಬೆಳವಣಿಗೆಯಿಂದ ನಮ್ಮ ಭಾಗದ ವ್ಯಾಪಾರಸ್ಥರಿಗೆ ಅನುಕೂಲವಾಯಿತು ಎಂದರು.
ಪ್ರವಾಸೋದ್ಯಮ ಇಲಾಖೆಯಲ್ಲಿ ಗ್ರೀನ್ ಪೊಲೀಸ್ ವ್ಯವಸ್ಥೆ ಪರಿಚಯಿಸಿ ಗೈಡ್ ಹಾಗೂ ಪ್ರವಾಸಿಗರ ರಕ್ಷಣೆ ಒದಗಿಸುವ ವ್ಯವಸ್ಥೆ ಮಾಡಿದ್ದೆ. ವಿಜಯನಗರ ಸಾಮ್ರಾಜ್ಯ ಅಂದು ಗೋವಾ, ತಮಿಳುನಾಡು, ಓರಿಸ್ಸಾ, ಪಶ್ಚಿಮ ಬಂಗಾಳದವರೆಗೆ ವಿಶಾಲವಾಗಿ ಹರಡಿತ್ತು. ಇಲ್ಲಿ ಹುಟ್ಟಿ ಬೆಳೆದ ನಾವುಗಳು ಪುಣ್ಯವಂತರು. ಅಂಜನಾದ್ರಿಗೆ ತಿರುಪತಿ ಮಾದರಿಯಲ್ಲಿ ಮೆಟ್ಟಿಲು, ಪ್ರದರ್ಶನ ಪಥ, ರಸ್ತೆ ಅಭಿವೃದ್ಧಿ ಮತ್ತು ರಸ್ತೆಯ ಎರಡು ಬದಿಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುತ್ತಿದ್ದೆವೆ. ಇದರಿಂದ ಅಂಜನಾದ್ರಿಗೆ ಬರುವ ಭಕ್ತರಿಗೆ ಅನುಕೂಲವಾಗಲಿದೆ. ಎಲ್ಲರಿಗೂ ಪ್ರವಾಸೋದ್ಯಮ ದಿನದ ಶುಭಾಶಯಗಳು ಎಂದು ಹೇಳಿದರು.
ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು, ಈ ವರ್ಷದ ವಿಶ್ವ ಪ್ರವಾಸೋದ್ಯಮ ದಿನದ ಸಂದೇಶ ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ಎಂಬುದಾಗಿದೆ. ಕಿಷ್ಕಿಂದಾ ಭಾಗದಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಬರುತ್ತಾರೆ. ಪರಿಸರಕ್ಕೆ ಹಾನಿಯಾಗಭಾರದು ಮತ್ತು ಇಲ್ಲಿಗೆ ಬರುವ ಪ್ರವಾಸಿಗರಿಗೆ ಒಳ್ಳೆಯ ವಾತಾವರಣ ಇರಬೇಕು ಎನ್ನುವ ಉದ್ದೇಶದಿಂದ ಜನರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ಬಳಕೆ ಮುಕ್ತ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸ ನೀಡಿದ ಡಾ. ಶರಣಬಸಪ್ಪ ಕೋಲ್ಕರ್ ಅವರು ಮಾತನಾಡಿ, ಪ್ರವಾಸೋದ್ಯಮ ಇಂದು ಕೃಷಿಯಂತೆ ಉದ್ಯಮವಾಗಿ ಪರಿಭಾವಿಸಲಾಗಿದೆ. ಜಗತ್ತಿನಾದ್ಯಂತ ಇದು ತುಂಭಾ ಪ್ರಸಿದ್ಧಿಯನ್ನು ಪಡೆಯುತ್ತಿದೆ. ಇದರಿಂದ ಜನರ ಬೌದ್ದಿಕ ಬೆಳವಣಿಗೆಗೆ ಕಾರಣವಾಗಿದೆ. ದೇಶ ನೋಡು ಕೋಶ ಓದು ಎನ್ನುವಂತೆ ಇದರಿಂದ ಜ್ಞಾನವನ್ನು ಪಡೆಯಬಹುದು. ಬೇರೆ ಬೇರೆ ಸ್ಥಳಗಳ ಸಂಸ್ಕೃತಿ, ಪರಂಪರೆ, ನಂಬಿಕೆ ಮತ್ತು ಜನಾಂಗ ಯಾವ ರೀತಿಯಲ್ಲಿ ಬದುಕಬೇಕು ಎಂಬುದರ ದಾರಿ ತೋರಿಸುತ್ತದೆ. ನಮ್ಮ ಭಾಗದಲ್ಲಿ ನೂರಾರು ಆದಿಮಾನವನ ವಾಸ ಸ್ಥಾನಗಳಿವೆ. ಪಂಪಾ ಕ್ಷೇತ್ರ. ಕಿಷ್ಕಿಂದಾ ಸೇರಿದಂತೆ ಅನೇಕ ಸ್ಥಳಗಳಿವೆ ನಮ್ಮ ಭಾಗದ ಚರಿತ್ರೆ ಜಗತ್ತಿಗೆ ತೋರಿಸಬೇಕಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕೊಪ್ಪಳ ಸೇರಿದಂತೆ ವಿವಿಧ ಇಲಾಖೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಸಂಘ ಸಂಸ್ಥೆಯವರು ಬಂದಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೆನೆ. ಭಾರತದ ನಮ್ಮ ಸಂಸ್ಕೃತಿ ನಾವು ಹೇಗೆ ಅವರನ್ನು ಪ್ರೀತಿ ವಿಶ್ವಾಸದಿಂದ ಕಾಣಬೇಕಿದೆ. ಅವರು ಇತರೆ ಪ್ರವಾಸಿಗರಿಗೆ ಈ ಭಾಗದ ಕುರಿತು ಒಳ್ಳೆಯ ಮಾಹಿತಿ ನೀಡುತ್ತಾರೆ. ನಾವು ಎಲ್ಲೂ ಪ್ಲಾಸ್ಟಿಕ್ ಎಸೆಯಲು ಅವಕಾಶ ಕೊಡಬಾರದು. ನಮ್ಮ ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಸಂದೇಶ ಒಂದು ರಾಜ್ಯ ಹಲವು ಜಗತ್ತುಗಳು ಎಂಬುದಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಆನೆಗೊಂದಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಜಿಲ್ಲಾ ಪಂಚಾಯತ ಯೋಜನಾ ನಿರ್ದೆಶಕ ಪ್ರಕಾಶ, ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿ ಸೆಜೇಶ್ವರ, ಆನೆಗೊಂದಿ ರಾಜ ವಶಂಸ್ಥರಾದ ಲಲಿತಾರಾಣಿ ಶ್ರೀ ರಂಗದೇವರಾಯಲು ಹಾಗೂ ರಾಜಾ ಶ್ರೀ ಕೃಷ್ಣ ದೇವರಾಯ, ಲಕ್ಷ್ಮೀ ಅರುಣಾ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ ಇಲಾಖೆಯ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಕನಕಗಿರಿ ತಹಶಿಲ್ದಾರ ವಿಶ್ವನಾಥ ಮುರಡಿ, ಗಂಗಾವತಿ ತಹಶಿಲ್ದಾರ ನಾಗರಾಜ ಮತ್ತು ಕೊಪ್ಪಳ, ಗಂಗಾವತಿ, ಕಿಷ್ಕಿಂದಾ ಚಾರಣ ಬಳಗ, ಗೋ ಗ್ರೀನ್ ಗಂಗಾವತಿ, ಪರಿಸರ ಸೇವಾ ಟ್ರಸ್ಟ್ ಗಂಗಾವತಿ ಪದಾಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About Mallikarjun

Check Also

screenshot 2025 10 09 09 44 42 09 40deb401b9ffe8e1df2f1cc5ba480b12.jpg

ಭೀಮಣ್ಣ ಖಂಡ್ರೆಯವರು ಶರಣ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಅನರ್ಹ -ಸದ್ಗುರು ಬಸವಪ್ರಭು ಸ್ವಾಮೀಜಿ 

Bhimanna Khandre is not eligible for the Sharan Samaj Seva Ratna award - Sadhguru Basavaprabhu …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.