Breaking News

ವಿಶ್ವ ರೇಬಿಸ್ ದಿನ: ಜಾಗೃತಿ ಕಾರ್ಯಕ್ರಮ

World Rabies Day: Awareness program
Screenshot 2025 09 30 21 08 04 10 E307a3f9df9f380ebaf106e1dc980bb64297602463682311645
ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಕೊಪ್ಪಳ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮುನಿರಾಬಾದ್ ಇವರ ಸಂಯುಕ್ತಾಶ್ರಯದಲ್ಲಿ ಸೆ.29 ರಂದು ಮುನಿರಾಬಾದ್‌ನ ಸಮುದಾಯ ಅರೋಗ್ಯ ಕೇಂದ್ರದ ಸಭಾ ಭವನದಲ್ಲಿ ವಿಶ್ವ ರೇಬಿಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಹೆಚ್.ತೊಗರಿ ಅವರು, ನಾಯಿ ಕಡಿತದಿಂದ ಸಾರ್ವಜನಿಕರು ಜಾಗೃತರಾಗಬೇಕು. ಪ್ರತಿ ವರ್ಷ ಸೆಪ್ಟೆಂಬರ್ 28 ರಂದು ವಿಶ್ವ ರೇಬಿಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಉದ್ದೇಶ ರೇಬಿಸ್ ಖಾಯಿಲೆಯಿಂದ ಉಂಟಾಗುವ ಸಾವು-ನೋವುಗಳನ್ನು ತಡೆಗಟ್ಟುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ. ರೇಬಿಸ್ ತಡೆಗಟ್ಟಲು ಮುಂದಾಗೋಣ: ನೀವು, ನಾವು, ನಮ್ಮ ಸಮಾಜ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ರೇಬಿಸ್ ವೈರಸ್ ಸೋಂಕಿತ ಪ್ರಾಣಿಗಳು ಮನುಷ್ಯರಿಗೆ ಕಚ್ಚುವುದರಿಂದ ರೇಬಿಸ್ ಖಾಯಿಲೆ ಹರಡುತ್ತದೆ. ಹೆಚ್ಚು ಪ್ರಮಾಣದಲ್ಲಿ ಬೀದಿನಾಯಿಗಳ ಕಡಿತದಿಂದ ಸಂಭವಿಸುತ್ತದೆ ಎಂದು ಹೇಳಿದರು.
ಒಂದುವೇಳೆ ನಾಯಿ ಕಚ್ಚಿದರೆ ಕಚ್ಚಿದ ಜಾಗವನ್ನು ಸೋಪು ಮತ್ತು ಶುದ್ದ ಹರಿಯುವ ನಲ್ಲಿ(ನಳ) ನೀರಿನಲ್ಲಿ 15 ನಿಮಿಷ ತೊಳೆಯಬೇಕು. ಕಚ್ಚಿದ ಜಾಗಕ್ಕೆ ಸ್ಥಳೀಯವಾಗಿ ಲಭ್ಯವಿರುವ ನಂಜು ನಿರೋಧಕ ಔಷಧಿ ಲಭ್ಯವಿದ್ದರೆ ಹಚ್ಚಿರಿ. ಕಚ್ಚಿದ ಜಾಗವನ್ನು ಬ್ಯಾಂಡೇಜ್ ಅಥವಾ ಯಾವುದೇ ರೀತಿಯ ಬಟ್ಟೆಯಿಂದ ಮುಚ್ಚಬೇಡಿ. ಕಚ್ಚಿದ ಜಾಗಕ್ಕೆ ಕೆಸರು, ಹಸುವಿನ ಸಗಣೆ, ಕಾಫಿಪುಡಿ, ಮೆಣಸಿನಪುಡಿ, ಸುಣ್ಣ ಅಥವಾ ಇತರೆ ಯವುದೇ ಕಿರಿ-ಕಿರಿ ಉಂಟುಮಾಡುವ ಪದಾರ್ಥ ಹಚ್ಚಬೇಡಿ. ಎಲ್ಲಾ ನಾಯಿಗಳಿಗೆ ಪಶು ಸಂಗೋಪನಾ ಇಲಾಖೆಯಿಂದ ನೀಡುವ ಚುಚ್ಚುಮದ್ದನ್ನು ತಪ್ಪದೇ ಹಾಕಿಸಬೇಕು. ನಾಯಿ ಅಥವಾ ಯಾವುದೇ ಪ್ರಾಣಿ ಕಡಿತವಾದಲ್ಲಿ ತಕ್ಷಣ ನಿಮ್ಮ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಬೇಕು. ನಾಯಿ ಕಡಿತದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷö್ಯ ಮಾಡಬಾರದು ಹಾಗೂ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟುವ ಲಸಿಕೆ(ಎಆರ್‌ವಿ) ಮತ್ತು ರೇಬಿಸ್ ಇಮ್ಯುನೊ ಗ್ಲೋಬ್ಯುಲಿನ್ (ಆರ್‌ಐಜಿ) ಚಿಕಿತ್ಸೆ ಉಚಿತವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ವಿಶ್ವ ಹೃದಯ ದಿನ ಹಾಗೂ ಅಂತರಾಷ್ಟಿçÃಯ ಸುರಕ್ಷಿತ ಗರ್ಭಪಾತ ದಿನ ಮತ್ತು ಇತರೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ವಿವರವಾಗಿ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಮಾತನಾಡಿ, ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದ್ದು, ಈ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಹಿಳೆಯರ ಆರೋಗ್ಯ ರಕ್ಷಣೆ ಕುರಿತು ವಿವಿಧ ರೀತಿಯ ವೈದ್ಯಕೀಯ ಸೌಲಭ್ಯ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಎನ್.ಸಿ.ಡಿ ವೈದ್ಯಾಧಿಕಾರಿ ಡಾ. ಪವನಸಿಂಗ್ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ವೈದ್ಯಾಧಿಕಾರಿ ಡಾ.ರಾಜಲಕ್ಷಿö್ಮÃ, ಮಕ್ಕಳ ತಜ್ಞ ಡಾ.ರಾಜಶೇಖರ, ಅರವಳಿಕೆ ತಜ್ಞ ಡಾ.ಭವಾನಿ, ದಂತ ವೈದ್ಯಾಧಿಕಾರಿ ಡಾ.ಶೃತಿ, ಆಯುಷ್ ವೈದ್ಯಾಧಿಕಾರಿ ಡಾ.ಜ್ಯೋತಿ, ಹಿರಿಯ ಫಾರ್ಮಸಿ ಅಧಿಕಾರಿ ಅಂಬುಜಾ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಮಾ, ದ್ರಾಕ್ಷಾಯಣಿ, ಗ್ರಾಮದ ಮುಖಂಡರು, ಸಾರ್ವಜನಿಕರು, ವಿವಿಧ ವೃಂದದ ಅಧಿಕಾರಿಗಳು, ಸಿಬ್ಬಂದಿವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ವಿತರಿಸಲಾಯಿತು.

About Mallikarjun

Check Also

screenshot 2025 10 09 09 44 42 09 40deb401b9ffe8e1df2f1cc5ba480b12.jpg

ಭೀಮಣ್ಣ ಖಂಡ್ರೆಯವರು ಶರಣ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಅನರ್ಹ -ಸದ್ಗುರು ಬಸವಪ್ರಭು ಸ್ವಾಮೀಜಿ 

Bhimanna Khandre is not eligible for the Sharan Samaj Seva Ratna award - Sadhguru Basavaprabhu …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.