Breaking News

ಜಿಲ್ಲೆಯಲ್ಲಿ ಶೇಂಗಾ ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ

Peanut purchasing center opens in district: Farmers urged to register

ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ.7263/- ರಂತೆ ಗರಿಷ್ಠ 61,148 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 30 ರಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆಯಲ್ಲಿ ಶೇಂಗಾ ಖರೀದಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
ಖರೀದಿ ಕೇಂದ್ರಗಳಾದ ಕೆಒಎಫ್ ಅಡಿಯಲ್ಲಿ ಅಳವಂಡಿಯ ಒಜಿಸಿಎಸ್ ಅಳವಂಡಿ, ಯಲಬುರ್ಗಾದ ಒಜಿಸಿಎಸ್ ಬೇವೂರು ಹಾಗೂ ನಾಗನಕಲ್‌ನ ಒಜಿಸಿಎಸ್ ನಾಗನಕಲ್‌ನ ನೋಂದಣಿ ಕೇಂದ್ರದಲ್ಲಿ ರೈತರು ನೋಂದಣಿ ಮಾಡಿಕೊಳ್ಳಬಹುದು.
ಖರೀದಿ ಕೇಂದ್ರಗಳ ವ್ಯವಸ್ಥಿತ ನಿರ್ವಹಣೆಗೆ ಕೊಪ್ಪಳ ತಾಲ್ಲೂಕಿನ ಅಳವಂಡಿ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕೊಪ್ಪಳ ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ, ಮೊ.ಸಂ: 9902224089, ಯಲಬುರ್ಗಾ ತಾಲ್ಲೂಕಿನ ಬೇವೂರು ಖರೀದಿ ಕೇಂದ್ರಗಳ ನೋಡಲ್ ಅಧಿಕಾರಿಗಳಾಗಿ ಯಲಬುರ್ಗಾ ಎಪಿಎಂಸಿಯ ಕಾರ್ಯದರ್ಶಿ ಗುರುಪ್ರಸಾದ ಗುಡಿ, ಮೊ.ಸಂ: 9972054874, ಕಾರಟಗಿ ತಾಲ್ಲೂಕಿನ ನಾಗನಕಲ್ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕಾರಟಗಿ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಹರೀಶ ಪತ್ತಾರ, ಮೊ.ಸಂ: 9060893320 ಇವರನ್ನು ನಿಯೋಜಿಸಲಾಗಿದೆ.
ಪ್ರತಿ ಎಕರೆಗೆ 3 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್‌ನAತೆ ಶೇಂಗಾ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಮಾತ್ರ ಖರೀದಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು, ವಿಭಾಗೀಯ ಕಛೇರಿ, ಕೊಪ್ಪಳ ಮೊ.ಸಂ: 9591812142 ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

img202510021202142.jpg

ಸ್ವಾಭಿಮಾನಿ ಕಲ್ಯಾಣ ಪರ್ವ 12ನೇ ಶತಮಾನದ ಶರಣರ ಸ್ವಾಭಿಮಾನದ ಪ್ರತೀಕ

Swabhimani Kalyana Parva is a symbol of the self-respect of the 12th century Sharanas. ಹನ್ನೆರಡನೇ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.