Khadi Maratha and exhibition inaugurated at Koppal District Administration Building

ಕೊಪ್ಪಳ ಅಕ್ಟೋಬರ್ 02 (ಕರ್ನಾಟಕ ವಾರ್ತೆ): ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಅಕ್ಟೋಬರ್ 02 ರಿಂದ 10 ರವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾದ ಖಾದಿ ಮರಾಟ ಮತ್ತು ವಸ್ತು ಪ್ರದರ್ಶನಕ್ಕೆ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹಾಗೂ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವಸ್ತು ಪ್ರದರ್ಶನದಲ್ಲಿ ಖಾದಿ ಬಟ್ಟೆಗಳು, ರೆಡಿಮೇಡ್ ಡ್ರೆಸ್ಸೆಸ್, ಜಮಖಾನ, ಕೈವಸ್ತ್ರ, ಟವಲುಗಳು ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಾದ ಅಗರಬತ್ತಿ, ಸಾಬೂನು, ಜೇನುತುಪ್ಪ ಇತ್ಯಾದಿ ಉತ್ಪನ್ನಗಳು ಮಾರಾಟಕ್ಕಾಗಿ ಲಭ್ಯವಿರುತ್ತವೆ. ಆಸಕ್ತರು ಭಾಗವಹಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ತಿಳಿಸಿದ್ದಾರೆ.