Breaking News

  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ವಾಲ್ಮೀಕಿ ರಾಮಾಯಣ ಇಡೀ ಮನುಕುಲಕ್ಕೆ ನೀಡಿದ ಅದ್ಭುತ ಕೊಡುಗೆ- ಸಚಿವ ಶಿವರಾಜ ತಂಗಡಗಿ

Shri Maharishi Valmiki Jayanti: Valmiki Ramayana is a wonderful contribution to the entire humanity - Minister Shivraj Thangadgi

Screenshot 2025 10 07 20 09 52 66 E307a3f9df9f380ebaf106e1dc980bb6870035956661518134

ಕೊಪ್ಪಳ ಅಕ್ಟೋಬರ್ 07 (ಕರ್ನಾಟಕ ವಾರ್ತೆ): ನಮ್ಮ ಹಿಂದು ಧರ್ಮದಲ್ಲಿ ಎರಡು ಮಹಾ ಕಾವ್ಯಗಳನ್ನು ನಾವು ನೋಡುತ್ತೇವೆ. ಅದರಲ್ಲಿ ಒಂದು ಮಹರ್ಷಿ ವಾಲ್ಮೀಕಿರವರು ಬರೆದ ರಾಮಾಯಣ ಮಹಾ ಗ್ರಂಥವು ಇಡೀ ಮನುಕುಲಕ್ಕೆ ನೀಡಿದ ಅದ್ಭುತ ಮಹಾಕಾವ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.

ಅವರು ಮಂಗಳವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

Screenshot 2025 10 07 20 09 04 51 E307a3f9df9f380ebaf106e1dc980bb63416183277400500461

ಇಂದಿನ ಯುವ ಪೀಳಿಗೆಗೆ ಮಹಾನ್ ಯುಗಪುರುಷರು ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಮಹಾಪುರುಷರ ಇತಿಹಾಸದ ಬಗ್ಗೆ ತಿಳಿಸುವುದಕ್ಕಾಗಿ ಸರ್ಕಾರದಿಂದ ಮಹರ್ಷಿ ವಾಲ್ಮೀಕಿ ರವರಂತವರ ಮಹನೀಯರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತದೆ. ಸಮಾಜದ ಎಲ್ಲಾ ಬಂಧುಗಳ ಒಂದು ಕಡೆ ಸೇರಬೇಕು. ಇತಿಹಾಸದ ಮಹಾ ಪುರುಷರನ್ನ ನೆನಪು ಮಾಡಿಕೊಳ್ಳಬೇಕು‌ ಮತ್ತು ಅವರು ಮಾಡಿದ ಕಾರ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ದೃಷ್ಟಿ ಕೋನವನ್ನು ಇಟ್ಟುಕೊಂಡು ಮಹಾಪುರುಷರ ಜಯಂತಿಯನ್ನು ಆಚರಿಸಲಾಗುತ್ತದೆ. ಇಂತಹ ಮಹನೀಯರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಬಾರದು ಎಂದರು.

ರಿಸರ್ವೆಷನ್ ಗೆ ಅನುಗುಣವಾಗಿ ಸರ್ಕಾರದ ಬಜೆಟ್ ನಲ್ಲಿ ಮಿಸಲು ಇಟ್ಟಿರುವುದು ಸರ್ಕಾರದ ಮಹತ್ವದ ಕೆಲಸ ಆಗಿದೆ. ಸರ್ಕಾರದ ಬಜೆಟ್ ನಲ್ಲಿ ಶೇ.24.1 ರಷ್ಟು ಹಣವನ್ನು ಎಸ್ಸಿ-ಎಸ್ಟಿ ಅಭಿವೃದ್ಧಿಗಾಗಿ ಮೀಸಲು ಇಟ್ಟಿರುವುದು ಬಹುಮುಖ್ಯ ಕಾರ್ಯವಾಗಿದೆ. ನಮ್ಮ ಜಿಲ್ಲೆಯಲ್ಲಿ ನಾಯಕ ಸಮಾಜದ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ  ಜಿಲ್ಲೆಯಲ್ಲಿನ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಸ್ವಲ್ಪ ಹಾಸ್ಟೆಲ್ ಗಳ ಕೊರತೆ ಇದೆ, ಅದನ್ನು ಆದಷ್ಟು ಬೇಗನೆ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ಈ ಕೊರತೆ ನೀಗಿಸುವ ಕೆಲಸ ಮಾಡುತ್ತನೆ ಎಂದು ಹೇಳಿದರು.

ಏಕಲವ್ಯ ವಸತಿ ಶಾಲೆ  ಚಾಮರಾಜನಗರದಲ್ಲಿ ಮಾತ್ರ ಇದೆ, ಹಾಗಾಗಿ  ಕರ್ನಾಟಕದಲ್ಲಿ ಅತೀ ಹೆಚ್ಚು ವಾಲ್ಮೀಕಿ ಜನಾಂಗದರು ಇರುವ ನಮ್ಮ ಕೊಪ್ಪಳ ಜಿಲ್ಲೆಗೂ ಕೂಡ, ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡುವಂತೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದಿದ್ದೆನೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ನಮ್ಮ ಜಿಲ್ಲೆಗೆ ಆಗಬೇಕಾಗಿದ್ದು, ಅದಕ್ಕೂ ಕೂಡಾ ನಾನು ಪ್ರಸ್ತಾವನೆ ನೀಡಿದ್ದೇನೆ. ಇದಕ್ಕೆ ಮುಖ್ಯ ಮಂತ್ರಿಗಳು ಇನ್ನು ಎರಡೂ-ಮೂರು ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯನ್ನು ಮಾಡುವುದಿದೆ. ಅದರಲ್ಲಿ ಕೊಪ್ಪಳ ಜಿಲ್ಲೆಯ ಕೂಡ ಇದೆ ಅನ್ನುವಂತ ಮಾತನ್ನು  ಹೇಳಿದ್ದಾರೆ ಎಂದರು.

ಕೊಪ್ಪಳ ನಗರದಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿ ಅವಶ್ಯಕತೆ ಇದ್ದು, ನಗರದಲ್ಲಿ ಸಂಚರಿಸುವಾಗ ಇಂತಹ ಪುಣ್ಯಾತ್ಮರ ದರ್ಶನ ಆಗಬೇಕು. ಅದಕ್ಕಾಗಿ ನಾನು ಈಗಾಗಲೆ ಶಾಸಕರಿಗೆ ಮತ್ತು ನಗರ ಸಭೆ ಅಧ್ಯಕ್ಷರಿಗೆ ಹೇಳಿದ್ದನೆ. ಮೂರ್ತಿ ಸ್ಥಾಪನೆಗಾಗಿ ಎರಡು ಸ್ಥಳಗಳನ್ನು ಗುರುತಿಸಲಾಗಿದೆ ಒಂದು ನಗರ ಸಭೆಯ ಸ್ಥಳ ಇನ್ನೊಂದು ಎಲ್.ಐ.ಸಿ ಆಫಿಸ್ ಹತ್ತಿರದ ಸ್ಥಳಗಳನ್ನು ತೋರಿಸಿದ್ದಾರೆ. ಇದರಲ್ಲಿ ಯಾವುದಾದರೂ ಜಾಗವನ್ನು ನಿಗದಿ ಮಾಡಿ, ಮಹರ್ಷಿ ವಾಲ್ಮೀಕಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಮುಂದಿನ ಜಯಂತಿಯನ್ನು ಮೂರ್ತಿ ಸಮೇತ ಆಚರಣೆ ಮಾಡುವಂತ ಕಾರ್ಯವನ್ನು ಮಾಡೋಣ. ಕನಕಗಿರಿ ಮತ್ತು ಕಾರಟಗಿ ತಾಲ್ಲೂಕುಗಳಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡುವುದಕ್ಕಾಗಿ ಎರಡು ತಾಲ್ಲೂಕುಗಳಿಗೆ ತಲಾ 2ಕೋಟಿ ರೂ. ನೀಡಿದ್ದೇನೆ ಎಂದು ಹೇಳಿದರು.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಹೇಮಲತ ನಾಯಕ ಅವರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣದಿಂದ ನಾವು ಸಾಕಷ್ಟು ಪ್ರತಿ-ಭ್ರಾತೃತ್ವವನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಅಂತಹ ಮಹತ್ವದ ಗ್ರಂಥವನ್ನು ನೀಡಿದ ಕೀರ್ತಿ ನಮ್ಮ ವಾಲ್ಮೀಕಿ ಸಮಾಜಕ್ಕೆ ಸಲ್ಲುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿನ ಪ್ರತಿಯೊಂದು ಎಸ್ಟಿ ಹಾಸ್ಟೆಲ್ ಗಳಿಗೆ ಅಗತ್ತವಿರುವ ಮೂಲ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಜಿಲ್ಲೆಗೆ ಇನ್ನು ಹೆಚ್ಚಿನ ಪ್ರಮಾಣದ ಎಸ್ಟಿ ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್ ಗಳು ಅವಶ್ಯಕತೆ ಇದ್ದು, ಇದರಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಉಂಟಾಗುತ್ತದೆ. ಅದಕ್ಕಾಗಿ ಆದಷ್ಟು ಬೇಗ ಜಿಲ್ಲಾ ಉಸ್ತುವಾರಿ ಸಚಿವರು ಅಗತ್ಯ ಪ್ರಮಾಣದ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ನಮ್ಮ ಸಮಾಜ ಅಭಿವೃದ್ಧಿ ಹೊಂದಲು ಮೊದಲು ನಾವು ಉತ್ತಮ ಶಿಕ್ಷಣ ಪಡೆದು ಶಿಕ್ಷಣವಂತರಾಗಬೇಕು. ಅಂದಾಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯಾಗಲು ಸಾಧ್ಯ. ಅದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ನಗರಸಭೆಯ ಅಧ್ಯಕ್ಷರಾದ ಅಮ್ಜದ ಪಟೇಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಹಿಂದು ಧರ್ಮದ ಸುಪ್ರಸಿದ್ಧ ಕಾವ್ಯಗಳಲ್ಲಿ ಒಂದಾದ ರಾಮಾಯಣವನ್ನು ರಚಿಸಿದ್ದಾರೆ. ಅದು ನ್ಯಾಯ, ಧರ್ಮ ಮತ್ತು ಮಾನವೀಯತೆಯ ಮಮಕಾರವನ್ನು ತಿಳಿಸುವ ಒಂದು ಮಹತ್ವದ ಗ್ರಂಥವಾಗಿದೆ. ಇವತ್ತು ನಾವೆಲ್ಲರೂ ಕೂಡ ಮಹರ್ಷಿ ವಾಲ್ಮೀಕಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಅವರು ನಮಗೆ ನೀಡಿರುವ ಧರ್ಮ ಗ್ರಂಥ ರಾಮಾಯಣದಲ್ಲಿನ ತತ್ವಾದರ್ಶಗನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಹೇಳಿದರು.

ಡಾ.ಗವಿಸಿದ್ದಪ್ಪ ಮುತ್ತಾಳ ಅವರು ವಿಶೇಷ ಉಪನ್ಯಾಸ ನೀಡಿ, ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣದಲ್ಲಿನ ತತ್ವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸರ್ಕಾರ ಈ ಜಯಂತಿ ಆಚರಣೆ ಮಾಡುತ್ತಿರುವುದಕ್ಕೆ ಒಂದು ಸಾರ್ಥಕತೆ ಸಿಗುತ್ತದೆ ಎಂದರು.

ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪದವಿ ಹಾಗೂ ಕ್ರೀಡೆ ಸೇರಿದಂತೆ ಮುಂತಾದ ಕಾರ್ಯಗಳಲ್ಲಿ ಸಾಧನೆ ಮಾಡಿದ ಪರಿಶಿಷ್ಟ ಪಂಗಡ ಸಮಾಜದ ಮಕ್ಕಳಿಗೆ ಸನ್ಮಾನ ಮಾಡಲಾಯಿತು ಹಾಗೂ ಪ್ರತಿ ವರ್ಷ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ಪರಿಶಿಷ್ಟ ಪಂಗಡದವರ ಸಮಾಜಿಕ ಕಾರ್ಯವನ್ನು ಗುರುತಿಸಿ 50 ಸಾವಿರ ನಗದು ಮತ್ತು ಗೌರವ ಸನ್ಮಾನಕ್ಕೆ ಸರಸ್ವತಿ ನಾಯಕ ಅವರು ಪಡೆದಿರುತ್ತಾರೆ.

ಈ ಕಾರ್ಯಕ್ರಮದಲ್ಲಿ  ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಡ್ಡಿ ಶ್ರೀನಿವಾಸ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಸೋಗಲದ, ಕೊಪ್ಪಳ ತಹಶಿಲ್ದಾರ ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಹಾಗೂ ವಾಲ್ಮೀಕಿ ಸಮಾಜದ ಜಿಲ್ಲಾ ಅಧ್ಯಕ್ಷ ಕೆ.ಎನ್.ಪಾಟೀಲ, ದರ್ಮದರ್ಶಿ ರಾಮಣ್ಣ ಕಲ್ಲನವರ, ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ ಡೊಣ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ನಾಯಕ, ಹನುಮಂತಪ್ಪ ನಾಯಕ ಸೇರಿದಂತೆ ಸಮಾಜದ ಇತರೆ ಮುಖಂಡರು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

*ಮೆರವಣಿಗೆ:* ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಕೊಪ್ಪಳ ನಗರದ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದ ವರೆಗೆ ನಡೆಯುವ ಮೆರವಣಿಗೆಗೆ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು  ಶ್ರೀ ಮಹರ್ಷಿ ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ

ಮಂಜುನಾಥ ಜಿ. ಗೊಂಡಬಾಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಗಂಗಪ್ಪ ಸೊಗಲದ ಸೇರಿದಂತೆ ಇತರೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದರು.

About Mallikarjun

Check Also

screenshot 2025 10 07 20 38 18 90 a71c66a550bc09ef2792e9ddf4b16f7a.jpg

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Many of my deepfake videos are circulating everywhere: Nirmala Sitharaman ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.